ಮಂಗಳವಾರ, ಜನವರಿ 19, 2021
19 °C

ರಾಜಕೀಯ ವೈಷಮ್ಯಕ್ಕೆ ಟೊಮೊಟೊ ಬೆಳೆ ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ದೊಡ್ಡಬಳ್ಳಾಪುರ: ರಾಜಕೀಯ ವೈಷಮ್ಯಕ್ಕೆ ತಾಲ್ಲೂಕಿನ ಕುರುವಿಗೆರೆ ಗ್ರಾಮದಲ್ಲಿ ಅಶ್ವತ್ಥ್ ನಾರಾಯಣ್ ಎಂಬುವವರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮೊಟೊ ಬೆಳೆ ರಾತ್ರೋರಾತ್ರಿ ದುಷ್ಕರ್ಮಿಗಳು ಹಾಳು ಮಾಡಿದ್ದಾರೆ.

ಟೊಮೊಟೊ ಫಸಲಿಗೆ ಬಂದಿದ್ದು ಮಾರುಕಟ್ಟೆಗೆ ಸಾಗಿಸುವ ಸಿದ್ಧತೆಯಲ್ಲಿದ್ದರು. ಭಾನುವಾರ ರಾತ್ರಿ ಟೊಮೊಟೊ ತೋಟಕ್ಕೆ ನುಗ್ಗಿರುವ ದುಷ್ಕರ್ಮಿಗಳು ಗಿಡಗಳು ಕತ್ತರಿಸಿ ಹಾಕಿದ್ದಾರೆ ಎಂದು ರೈತ ಅಶ್ವತ್ಥ್‌ನಾರಾಯಣ್ ಅಳಲು ತೊಡಿಕೊಂಡಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ರಾಜಕೀಯ ವೈಷಮ್ಯದಿಂದ ಬೆಳೆ ನಾಶ ಮಾಡಲಾಗಿದೆ ಎಂದು ಆರೋಪಿಸಿ ರೈತ ಅಶ್ವತ್ಥ್‌ನಾರಾಯಣ್‌ ಕೆಲ ಶಂಕಿತರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು