ಗ್ರಾಮೀಣ ಪ್ರದೇಶದಲ್ಲೂ ಮರಗಳ ನಾಶ: ಕಳವಳ

ಮಂಗಳವಾರ, ಜೂನ್ 25, 2019
25 °C

ಗ್ರಾಮೀಣ ಪ್ರದೇಶದಲ್ಲೂ ಮರಗಳ ನಾಶ: ಕಳವಳ

Published:
Updated:
Prajavani

ದೇವನಹಳ್ಳಿ: ‘ಪರಿಸರ ಕಾಳಜಿ ಪ್ರತಿಯೊಬ್ಬರಲ್ಲೂ ಇರಬೇಕು. ಶಾಲಾ ಹಂತದಲ್ಲೇ ಪರಿಸರ ಸಂರಕ್ಷಣೆ ಬಗ್ಗೆ ಶಿಕ್ಷಕರು ಹೆಚ್ಚಿನ ಮಾಹಿತಿಯನ್ನು ಮಕ್ಕಳಿಗೆ ತಿಳಿಸಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ದೇವರಾಜ್ ತಿಳಿಸಿದರು.

ಇಲ್ಲಿನ ಕಾರಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯಿತಿ ವತಿಯಿಂದ ವಿವಿಧ ಬಗೆಯ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಗ್ರಾಮೀಣ ಭಾಗದಲ್ಲೂ ಮರಗಳ ಕೊರತೆ ಹೆಚ್ಚುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ವನ ಸಂಪತ್ತು ನಾಶವಾಗುತ್ತಿದೆ. ಪ್ರಜ್ಞಾವಂತ ಸಮುದಾಯ ಪರಿಸರದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಗ್ರಾಮೀಣ ಪ್ರದೇಶಗಳು ಕಾಂಕ್ರಿಟ್‌ಮಯವಾಗುತ್ತಿವೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸದಿದ್ದರೆ ಮನುಕುಲ ಮತ್ತು ಜೀವಸಂಕುಲ ವಿನಾಶದತ್ತ ಸಾಗಲಿದೆ. ಬೆಳೆಯುತ್ತಿರುವ ಕೈಗಾರಿಕರಣ, ಹೆಚ್ಚುತ್ತಿರುವ ಭೂಮಿಯ ತಾಪಮಾನ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಪದೇ ಪದೇ ಸಂಭವಿಸುತ್ತಿರುವ ಪ್ರಕೃತಿ ವಿಕೋಪಗಳಿಂದ ಅಪಾರ ಜೀವ ಸಂಕುಲ ನಾಶವಾಗುತ್ತಿದೆ. ವಿಶ್ವ ಪರಿಸರ ದಿನಾಚರಣೆ ಅರ್ಥಪೂರ್ಣವಾಗಬೇಕಾದರೆ ನೆಡಲಾಗಿರುವ ಸಸಿಯನ್ನು ಸಂರಕ್ಷಣೆ ಮಾಡಿ ಬೆಳೆಸಬೇಕು’ ಎಂದು ಹೇಳಿದರು. 

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಸಿ ಬೀರೇಶ್ ಮಾತನಾಡಿ, ‘ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಸರ ಸಂರಕ್ಷಣೆ ಕುರಿತು ಅರಿವು ಮೂಡಿಸಲಾಗುತ್ತಿದೆ. ಕಾರಹಳ್ಳಿ ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲೂ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದೆ. ಗ್ರಾಮ ಅರಣ್ಯೀಕರಣಗೊಳ್ಳಲು ಹಲವು ಯೋಜನೆಗಳ ಮೂಲಕ ಜನ ಜಾಗೃತಿ ಮೂಡಿಸಿ ಪರಿಸರ ಉಳಿಸಿ ಬೆಳೆಸುವ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು’ ಎಂದರು.

ಪಂಚಾಯಿತಿ ಕಾರ್ಯದರ್ಶಿ ರಾಜೇಶ್, ಕರ ವಸೂಲಿಗಾರ ಬಾಬು, ಗಣಕಯಂತ್ರ ಆಪರೇಟರ್ ರವಿ ಇದ್ದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !