ಶುಕ್ರವಾರ, ಡಿಸೆಂಬರ್ 4, 2020
22 °C

ಕೈದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್ : ಪೆರೋಲ್‌ ಮೇಲೆ ಬಿಡುಗಡೆಯಾಗಿ ಅವಧಿ ಮುಗಿದ ನಂತರ ಜೈಲಿಗೆ ಹೋಗದೆ ತಲೆ ಮರೆಸಿಕೊಂಡಿದ್ದ ಕೈದಿಯೊಬ್ಬರನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಕೈದಿಯನ್ನು ಅಡವಯ್ಯ ಉರುಫ್‌ ಸ್ವಾಮಿ ಕುಂಬಯ್ಯ ಎಂದು ಗುರುತಿಸಲಾಗಿದೆ. ಕೈದಿ ಮೂಲತಃ ಬೆಳಗಾವಿ ಜಿಲ್ಲೆ ಮಾರಿಹಾಳ ಗ್ರಾಮದವರು. ಕೊಲೆ ಆರೋಪದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಗೋವಾ ರಾಜ್ಯದ ಕೊಲವಳೆ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಪೆರೋಲ್‌ ರಜೆ ಮುಕ್ತಾಯವಾದರೂ ಜೈಲಿಗೆ ತೆರಳದೆ ಜಿಗಣಿಯಲ್ಲಿ ತಲೆಮರೆಸಿಕೊಂಡಿದ್ದರು. ಬೆಳಗಾವಿ ಪೊಲೀಸರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಕೈದಿಯನ್ನು ಪತ್ತೆ ಹಚ್ಚಿ ಬೆಳಗಾವಿ ಪೊಲೀಸರ ವಶಕ್ಕೆ ನೀಡಿದ್ದಾರೆ ಎಂದು ಜಿಗಣಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ.ವಿಶ್ವನಾಥ್‌ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು