ದೇವನಹಳ್ಳಿ: ಪಟ್ಟಣದ ಹಲವು ಕಡೆ ಪ್ಲಾಸ್ಟಿಕ್ ಮಾರಾಟ ಮಳಿಗೆ ಹಾಗೂ ಗೋದಾಮುಗಳ ಮೇಲೆ ಪುರಸಭೆ ಅಧಿಕಾರಿಗಳ ತಂಡ ಮುಖ್ಯಾಧಿಕಾರಿ ಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿತು.

ಪ್ಲಾಸ್ಟಿಕ್ ಮಾರಾಟ ಮಳಿಗೆಗಳ ಮೇಲೆ ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಶ್ರೀದೇವಿ ಹಾಗೂ ಸಿಬ್ಬಂದಿ ವರ್ಗ ಭೇಟಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಕ್ಕೆ ಪಡೆದರು.

‘ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಚಿಂತನೆ ಹೊಂದಿದ್ದೇವೆ. ಪರಿಸರಕ್ಕೆ ಹಾನಿಕರ ಮತ್ತು 70 ಮೈಕ್ರಾನ್ ಗಿಂತಲೂ ಕಡಿಮೆ ಗುಣಮಟ್ಟದ 350 ಕೆ.ಜಿಗೂ ಹೆಚ್ಚಿನ ಪ್ಲಾಸ್ಟಿಕ್ ಉತ್ಪನ್ನ ವಶಕ್ಕೆ ಪಡೆದಿದ್ದೇವೆ. ದಾಳಿಯಲ್ಲಿ ₹20 ಸಾವಿರ ದಂಡ ವಸೂಲಿ ಮಾಡಲಾಗಿದೆ. ಮೂರು ಬಾರಿ ದಂಡ ವಿಧಿಸಿದ ನಂತರವೂ ಪ್ಲಾಸ್ಟಿಕ್ ಮಾರಾಟ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಕೈಗೊಳ್ಳಲಾಗುತ್ತಿದೆ’ ಎಂದು ಪುರಸಭಾ ಮುಖ್ಯಾಧಿಕಾರಿ ಶಿವಮೂರ್ತಿ ತಿಳಿಸಿದರು.

ಸಾರ್ವಜನಿಕರು ಅಂಗಡಿಗಳಿಗೆ ಹೋಗುವಾಗ ಕಡ್ಡಾಯವಾಗಿ ಬಟ್ಟೆ ಬ್ಯಾಗ್ ತೆಗೆದುಕೊಂಡು ಹೋಗಬೇಕು. ಆಗ ಮಾತ್ರ ಪ್ಲಾಸ್ಟಿಕ್ ನಿಷೇಧ ಸಂಪೂರ್ಣವಾಗಿ ಜಾರಿಗೆ ಬಂದಂತೆ ಆಗುತ್ತದ ಎಂದರು.

ಪುರಸಭೆ ಉಪಾಧ್ಯಕ್ಷ ಜಿ.ಎ.ರವೀಂದ್ರ, ಸಿಬ್ಬಂದಿ ಆದರ್ಶ, ಗೋಪಾಲ, ಅನಿಲ, ಮುನಿರಾಜು, ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.