ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: 326 ಭಾರತೀಯರ ಆಗಮನ

Last Updated 12 ಮೇ 2020, 10:13 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಕೋವಿಡ್-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಮಾನಯಾನ ಸಂಪರ್ಕ ಸ್ಥಗಿತಗೊಳಿಸಲಾಗಿತ್ತು. ಅನಿವಾಸಿ ಭಾರತೀಯರ ಆಗಮನಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿ ಲಂಡನ್‌ನಲ್ಲಿ ಅನಿವಾಸಿ 326 ಭಾರತೀಯರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುಂಜಾನೆ ಬಂದು ಇಳಿದಿದ್ದಾರೆ’ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ, ‘ಆರೋಗ್ಯ ಇಲಾಖೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗತ್ಯ ಸಕಲ ಸಿದ್ದತೆ ಮಾಡಿಕೊಳ್ಳಲಾಗಿತ್ತು. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕ 14 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರುವುದು ಕಡ್ಡಾಯ. ಕ್ವಾರಂಟೈನ್ ಅವಧಿ ಮುಗಿದ ನಂತರ ತಮ್ಮ ಕುಟುಂಬವನ್ನು ಸೇರಿಕೊಳ್ಳಲಿದ್ದಾರೆ’ ಎಂದು ಹೇಳಿದರು.

‘ಪ್ರತಿಯೊಬ್ಬರಿಗೂ ತಪಾಸಣೆ ನಡೆಸಿದ ನಂತರ ಬಿಎಂಟಿಸಿ ಬಸ್ಸುಗಳ ಮೂಲಕ ಬೆಂಗಳೂರು ನಗರದ ವಿವಿಧ ಹೋಟೆಲ್‌ ಮತ್ತು ರೆಸಾರ್ಟ್‌ಗಳಲ್ಲಿ ಕ್ವಾರೆಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರಿಗೆ ಈಗಾಗಲೇ 18 ಪಂಚತಾರ, 26 ಸ್ಟಾರ್ 40 ಸಾಧಾರಣ ಹೋಟಲ್ ಹಾಗೂ ರೆಸಾರ್ಟ್ ಬಳಸಲಾಗುತ್ತಿದೆ. ಕ್ವಾರೆಂಟೈನ್ ಸ್ಥಳ ಮತ್ತು ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ, ಕ್ವಾರಂಟೈನ್ ವೆಚ್ಚವನ್ನು ಪ್ರಯಾಣಿಕರೇ ಭರಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT