ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಿ‌ಗೆ ವಿಮಾನ ನಿಲ್ದಾಣ ಪ್ರಾಧಿಕಾರ ಅಧ್ಯಕ್ಷ ಸ್ಥಾನ ಮಾರಾಟ: ಆರೋಪ

Published 5 ಫೆಬ್ರುವರಿ 2024, 6:55 IST
Last Updated 5 ಫೆಬ್ರುವರಿ 2024, 6:55 IST
ಅಕ್ಷರ ಗಾತ್ರ

ದೇವನಹಳ್ಳಿ: ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಕೋಟಿಗಳಲ್ಲಿ ಮಾರಾಟವಾಗಿರುವ ಅನುಮಾನವಿದೆ. ಈ ಕುರಿತು ತನಿಖೆಯಾಗಬೇಕಿದೆ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ  ಒತ್ತಾಯಿಸಿದರು.

ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ‌, ಪ್ರಾಧಿಕಾರ ಸ್ಥಾನ ಮಾರಾಟದ ಕುರಿತು ದೂರು ದಾಖಲಿಸಲಾಗುವುದು. ಈ ಸಮಗ್ರವಾಗಿ ತನಿಖೆ ನಡೆಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಚುನಾವಣೆ ಹಿನ್ನಲೆಯಲ್ಲಿ ನಿಗಮ ಮಂಡಳಿಗಳಿ ಅಧ್ಯಕ್ಷ ಸ್ಥಾನಗಳನ್ನು ತುಂಬುತ್ತಿದ್ದಾರೆ. ಈ ಮೂಲಕ ಪಕ್ಷದ ಆಂತರಿಕ ಕಲಹ ಶಮನಗೊಳಿಸಲು ಕಾಂಗ್ರೆಸ್‌ ಯತ್ನಿಸುತ್ತಿದೆ ಎಂದು ಹೇಳಿದರು.

ಕಾಂಗ್ರೆಸಿಗರು ರಾಜ್ಯದ ಮುಖ್ಯಮಂತ್ರಿಯಾಗಬೇಕಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷ ಸ್ಥಾನ ನೀಡಿ, ಇಳಿ ವಯಸ್ಸಿನಲ್ಲಿ ಸಂಕಷ್ಟಕ್ಕೆ ದೂಡಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುಂದರೇಶ್, ತಾ.ಪಂ ಮಾಜಿ ಅಧ್ಯಕ್ಷ ಓಬದೇನಹಳ್ಳಿ ಮುನಿಯಪ್ಪ, ಮುಖಂಡ ದೇಸು ನಾಗರಾಜು, ಟೌನ್ ಬಿಜೆಪಿ ಅಧ್ಯಕ್ಷ ಸಂದೀಪ್, ಯುವಮುಖಂಡ ಸಂದೀಪ್, ವಿನಯ್ ಕುಮಾರ್ ಇದ್ದರು.

ರಾಜ್ಯ ‌ಹಿಂದುತ್ವ ವಿರೋಧಿ ವಾತಾವರಣ ಸೃಷ್ಟಿ: ಎಲ್ಲಿ ರಾಮನ ವಿಚಾರ ಇರುತ್ತದೋ ಅಲ್ಲಿ ಹನುಮ ಧ್ವಜ ಹಾರಾಡುತ್ತದೆ. ಆದರೆ ಧಾರ್ಮಿಕ ಭಾವನೆಗೆ ಧಕ್ಕೆ ತಂದು, ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುತ್ತಿರುವುದು ಖಂಡನೀಯ. ರಾಜ್ಯದಲ್ಲಿ ಹಿಂದುತ್ವ ವಿರೋಧಿ ವಾತಾವರಣ ಸೃಷ್ಟಿಯಾಗಲು ಕಾಂಗ್ರೆಸ್‌ ಸರ್ಕಾರವೇ ಕಾರಣ ಎಂದು ವಿಧಾನ ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT