ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್–2ರಲ್ಲಿರುವ ಮದ್ಯ ಮಾರಾಟ ಮಳಿಗೆಯ ಅನುಮತಿ ಅವಧಿ ಮೀರಿ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಮದ್ಯ ಮಾರಾಟ ಮಾಡಿದ ಆರೋಪದ ಮೇಲೆ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏ.7ರಂದು ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಬಸಪ್ಪ ಬಿಲ್ಲೂರು ವಿಮಾನ ನಿಲ್ದಾಣದ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ವೇಳೆ ಟರ್ಮಿನಲ್-2ರಲ್ಲಿ ಇರುವ ‘ಲಿವಿಂಗ್ ಲಿಕ್ವಿಡ್ಸ್’ ಎಂಆರ್ಪಿ ಮದ್ಯ ಮಳಿಗೆ ರಾತ್ರಿ ಸುಮಾರು 11.45ರ ಸುಮಾರಿಗೆ ತೆರೆದು ಮಾರಾಟ ನಡೆಸುತ್ತಿತ್ತು.

ಅನುಮತಿ ನೀಡಿದ ಸಮಯ ಮೀರಿ ಮಳಿಗೆ ತೆರೆದಿರುವುದು ನಿಯಮ ಉಲ್ಲಂಘನೆ ಎಂದು ಮದ್ಯ ಮರಾಟ ಮಳಿಗೆ ಸಿಬ್ಬಂದಿಗೆ ತಿಳಿಸಿ, ಮಳಿಗೆ ಮುಚ್ಚುವಂತೆ ಸೂಚಿಸಿದರು. ಸೂಚನೆ ನಿರ್ಲಕ್ಷ್ಯಿಸಿ ವ್ಯವಹಾರ ಮುಂದುವರಿಸಿದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜನಸಂಚಾರ ಹೆಚ್ಚಿರುವ ಪ್ರದೇಶದಲ್ಲಿ ಅನುಮತಿ ಮೀರಿ ಮದ್ಯ ಮಾರಾಟ ನಡೆಸುವುದು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವ ಸಾಧ್ಯತೆ ಇದೆ ಎಂದು ಪೊಲೀಸರು ವರದಿ ಸಲ್ಲಿಸಿದ್ದಾರೆ.

ಮದ್ಯ ಮಳಿಗೆಗಳಿಗೆ ರಾತ್ರಿ 10 ಗಂಟೆಯವರೆಗೆ ಮಾತ್ರ ಕಾರ್ಯನಿರ್ವಹಿಸಲು ಅನುಮತಿ ಇದೆ. ಆದರೆ, ಡ್ಯೂಟಿ-ಫ್ರೀ ಮಳಿಗೆಗಳು 24 ತಾಸು ಕಾರ್ಯನಿರ್ವಹಿಸಬಹುದು. ಈ ಮಳಿಗೆ ಪದೇ ಪದೇ ಸಮಯ ಮೀರಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಡ್ಯೂಟಿ ಫ್ರೀ ಮಳಿಗೆಯಾಗಿರುವುದಿಲ್ಲ ಎಂಬುದಾಗಿ ಪೊಲೀಸರು ಆರೋಪಿಸಿದ್ದಾರೆ. ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-16-1850648794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.