ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸರ್ಕಲ್ ಸಮೀಪ ಶುಕ್ರವಾರ ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದರಿಂದ ಹಿಂಬದಿ ಸವಾರ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ತುಂಬಾ ಗ್ರಾಮದ ವಿಜಯ್ ಕುಮಾರ್ ಸಂಗನಬಸಪ್ಪ ಗೌಡ ಪಾಟೀಲ (38) ಮೃತರು. ಮೃತರು ಸ್ನೇಹಿತ ಅಂಜನ್ ಜತೆ ದ್ವಿಚಕ್ರ ವಾಹನದಲ್ಲಿ ವಿಮಾನ ನಿಲ್ದಾಣದಿಂದ ಬೆಂಗಳೂರು ಕಡೆಗೆ ತೆರಳುವ ವೇಳೆ ಬೈಕ್ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವಿಜಯ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗಾಯಗೊಂಡ ಬೈಕ್ ಸವಾರ ಅಂಜನ್ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇವನಹಳ್ಳಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-26-1207733683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.