ಕುಂದಾಣ (ದೇವನಹಳ್ಳಿ): ತಾಲ್ಲೂಕಿನ ಕುಂದಾಣ ಹೋಬಳಿಯ ಜಾಲಿಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಅಂಬೇಡ್ಕರ್ ಮತ್ತು ಬಾಬೂ ಜಗಜೀವನ್ ರಾಂ ಅವರ ಭಾವಚಿತ್ರವನ್ನು ಪಲ್ಲಕ್ಕಿ ಉತ್ಸವ ನಡೆಸಲಾಯಿತು.

ಮೆರವಣಿಗೆಗೆ ಚಾಲನೆ ನೀಡಿದ ಜಾಲಿಗೆ ಗ್ರಾ.ಪಂ ಅಧ್ಯಕ್ಷ ಎಸ್.ಎಂ.ಆನಂದ್ ಕುಮಾರ್, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮಂತ್ರದಿಂದ ಸಮಾಜಕ್ಕೆ ಹೊಸ ಮಾರ್ಗ ಹಾಕಿ ಕೊಟ್ಟ ಮಹಾನ್ ಮನವತಾವಾದಿ ಎಂದು ತಿಳಿಸಿದರು.

ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರ ನಿಂತವರು. ಅವರಿಗೆಲ್ಲ ನ್ಯಾಯ ಕೊಡಿಸಲು ತಮ್ಮ ಬದುಕನ್ನೇ ಮುಡಿಪಾಗಿಟ್ಟರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು ಎಂದು ಸ್ಮರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.