ದೇವನಹಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ತಾಲ್ಲೂಕಿನ ಬೀರಸಂದ್ರ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ಜೀವನ ಚರಿತ್ರೆಯನ್ನು ಓದುವುದರಿಂದ ಮಾತ್ರ ಸಾಲದು. ಸಮಾನತೆ, ಸ್ವಾತಂತ್ರ್ಯ ಮತ್ತು ಬಾಂಧವ್ಯ ಎಂಬ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಹೇಳಿದರು.

‘ಶಿಕ್ಷಣವೇ ಸಾಮಾಜಿಕ ಪರಿವರ್ತನೆ ಶಕ್ತಿ’ ಎಂಬ ಅವರ ಸಂದೇಶವನ್ನು ಯುವ ಜನರು ಅರ್ಥಮಾಡಿಕೊಂಡು ಅನುಸರಿಸಿದರೆ ದೇಶದಲ್ಲಿ ಮಹತ್ತರ ಬದಲಾವಣೆ ಸಾಧ್ಯವಾಗಲಿದೆ. ದೇಶ ಕಂಡ ಅಪರೂಪದ ಮಹಾನ್ ಚಿಂತಕ ಅವರು, ಸಂವಿಧಾನದ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ಒದಗಿಸಿದರು’ ಎಂದು ಸ್ಮರಿಸಿದರು.

ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಡಿದ ಅವರ ಧೈರ್ಯ ಮತ್ತು ದೃಢ ಸಂಕಲ್ಪ ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿದೆ. ಅವರ ತತ್ವ–ಸಿದ್ಧಾಂತ ಇಂದು ವಿಶ್ವದ ಅನೇಕ ದೇಶಗಳಲ್ಲಿ ಸಂಶೋಧನಾ ವಿಷಯಗಳಾಗಿವೆ. 'ಶಿಕ್ಷಿತನಾಗು, ಸಂಘಟಿತನಾಗು, ಹೋರಾಟ ಮಾಡು' ಎಂಬ ಅವರ ಮಾತುಗಳು ಸಮಾಜದ ಪ್ರಗತಿಗೆ ದಾರಿದೀಪವಾಗಿದೆ ಎಂದು ಹೇಳಿದರು.

ಉಪನ್ಯಾಸಕ ಶಿವಮೂರ್ತಿ ಅಂಬೇಡ್ಕರ್ ವಿಚಾರಧಾರೆ ಕುರಿತು ಉಪನ್ಯಾಸ ನೀಡಿದರು. ‘ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ ಮತ್ತು ಜಾತಿ ಭೇದಭಾವದ ವಿರುದ್ಧ ಅವರು ನಡೆಸಿದ ಹೋರಾಟ ಸಮಾಜದಲ್ಲಿ ಮಹತ್ತರ ಬದಲಾವಣೆ ತಂದಿತು. ಅವರು ರಚಿಸಿದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡುವ ಮೂಲಕ ನ್ಯಾಯಯುತ ಸಮಾಜ ನಿರ್ಮಾಣಕ್ಕೆ ಬುನಾದಿಯಾಯಿತು’ ಎಂದು ವಿವರಿಸಿದರು.

ಅಂಬೇಡ್ಕರ್ ಅವರು ಕೇವಲ ಕಾನೂನು ಪಂಡಿತರಷ್ಟೇ ಅಲ್ಲ. ಆರ್ಥಿಕ ತಜ್ಞರು. ಚಿಂತಕರು ಹಾಗೂ ಮಹಾನ್ ಸಮಾಜ ಸುಧಾರಕರಾಗಿದ್ದರು. ಅವರ ತತ್ವಗಳು ಮಹಿಳಾ ಸಮಾನತೆ, ಧಾರ್ಮಿಕ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಗೌರವವನ್ನು ಉತ್ತೇಜಿಸುತ್ತದೆ ಎಂದು ಹೇಳಿದರು.

ದಲಿತ ಸಂಘಟನೆಗಳ ಮುಖಂಡರಾದ ರವಿಕಲಾ ಹಾಗೂ ಮ್ಯಾಥ್ಯು ಮುನಿಯಪ್ಪ ಮಾತನಾಡಿದರು. ಇದೇ ವೇಳೆ ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮಾ ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-15-2125359081

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.