ದೇವನಹಳ್ಳಿ: ಜಿಲ್ಲಾಡಳಿತದಿಂದ ಮಂಗಳವಾರ ಕಾಯಕಯೋಗಿ ಜಗಜ್ಯೋತಿ ಬಸವಣ್ಣ ಹಾಗೂ ಶಂಕರಾಚಾರ್ಯರ ಜಯಂತಿ ಆಚರಿಸಲಾಯಿತು.

ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಬಸವಣ್ಣನವರ ಕಂಚಿನ ಪ್ರತಿಮೆ ಮಂಟಪದ ಬಳಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಎನ್. ಅನುರಾಧ ಅವರು ಬಸವಣ್ಣ ಹಾಗೂ ಶಂಕರಾಚಾರ್ಯರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದರು.

ಬಳಿ ಮಾತನಾಡಿದ ಅವರು, ಬಸವಣ್ಣನವರು ಸಮಾನತೆ, ಸೌಹಾರ್ದತೆ ಮತ್ತು ಕಾಯಕದ ಮಹತ್ವವನ್ನು ಸಮಾಜಕ್ಕೆ ಬೋಧಿಸಿದ ಮಹಾನ್ ಚಿಂತಕರು. ಅವರ ‘ಕಾಯಕವೇ ಕೈಲಾಸ’ ಎಂಬ ತತ್ವವು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಜಾತಿ, ಮತ ಬೇಧಗಳನ್ನು ತೊಡೆದು ಹಾಕಿ ಸಮಾನತೆಯ ಮೌಲ್ಯ ಬೆಳೆಸಲು ಅವರ ಚಿಂತನೆಗಳು ಮಾರ್ಗದರ್ಶಕವಾಗಿವೆ ಎಂದು ಹೇಳಿದರು.

ಜಗದ್ಗುರು ಶಂಕರಾಚಾರ್ಯರು ಆಧ್ಯಾತ್ಮಿಕ ಚಿಂತನೆಗಳ ಮೂಲಕ ಮಾನವ ಜೀವನದ ಅರ್ಥ ತಿಳಿಸಿಕೊಟ್ಟವರು. ಅವರ ಅದ್ವೈತ ತತ್ವವು ವಿಶ್ವಕ್ಕೆ ಏಕತೆಯ ಸಂದೇಶ ನೀಡುತ್ತದೆ. ಇಂತಹ ಮಹನೀಯರ ಜಯಂತಿಗಳನ್ನು ಆಚರಿಸುವುದರ ಮೂಲಕ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಬೆಳ್ಳಾವಿ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ, ಬಸವಣ್ಣನವರು ಸಮಾಜದಲ್ಲಿ ಸಮಾನತೆ ಮತ್ತು ಶ್ರೇಷ್ಠ ಮೌಲ್ಯ ಸ್ಥಾಪನೆಗಾಗಿ ಜೀವನವನ್ನೇ ಅರ್ಪಿಸಿದ ಮಹಾನುಭಾವ. ಅವರ ವಚನಗಳು ಜೀವನಕ್ಕೆ ಮಾರ್ಗದರ್ಶನ ನೀಡುತ್ತಿವೆ. ಇಂದಿನ ಯುವ ಪೀಳಿಗೆ ಮಹನೀಯರ ಆದರ್ಶ ಪಾಲಿಸಿದರೆ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಹೆಚ್ಚುತ್ತದೆ. ಜಯಂತಿ ಕೇವಲ ಆಚರಣೆಯಾಗಿ ಉಳಿಯದೆ, ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳುವ ದಿಕ್ಕಿನಲ್ಲಿ ಸಾಗಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರದ ಖಾನಿ ಮಠದ ಬಸವರಾಜ ಸ್ವಾಮೀಜಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-15-779627374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.