ಬೆಟ್ಟೇನಹಳ್ಳಿ(ದೇವನಹಳ್ಳಿ): ತಾಲ್ಲೂಕಿನ ಕುಂದಾಣ ಹೋಬಳಿಯ ಬೆಟ್ಟೇನಹಳ್ಳಿಯಲ್ಲಿ ರಾಮನವಮಿ ಪ್ರಸಾದ ಸೇವಿಸಿದ 400ಕ್ಕೂ ಹೆಚ್ಚು ಗ್ರಾಮಸ್ಥರ ಆರೋಗ್ಯ ಏರುಪೇರಾಗಿದೆ. ಅಸ್ವಸ್ಥರಾದ ನೂರಕ್ಕೂ ಹೆಚ್ಚು ಗ್ರಾಮಸ್ಥರನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಮನವಮಿ ಪ್ರಯುಕ್ತ ಶನಿವಾರ ಅನ್ನ ಪ್ರಸಾದ ವಿತರಿಸಲಾಗಿತ್ತು. ಪ್ರಸಾದ ಸೇವಿಸಿದ ಬಳಿಕ ರಾತ್ರಿಯೇ ಕೆಲವರಿಗೆ ಹೊಟ್ಟೆನೋವು, ವಾಂತಿ, ಬೇಧಿ ಶುರುವಾಗಿ ಸುಸ್ತಾಗಿದ್ದಾರೆ.

ಹಲವರನ್ನು ಸಮೀಪದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಅಸ್ವಸ್ಥರಾದವರನ್ನು ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗ್ರಾಮದಲ್ಲಿ ಬೀಡುಬಿಟ್ಟಿರುವ ಆರೋಗ್ಯ ಸಿಬ್ಬಂದಿ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.

ಅನ್ನಪ್ರಸಾದ ಹಾಗೂ ಬಳಸಿದ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಶೀಘ್ರ ಲಭ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.