ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಕಾರ್ಯಚಟುವಟಿಕೆ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಚಕ್ಕೊತಾ ಸಂರಕ್ಷಣೆ
ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ 13ನೇ ಶತಮಾನದಲ್ಲಿ ಚೋಳರ ಅಳ್ವಿಕೆ ಕಾಲದಲ್ಲಿ ನೆಡಲಾಗಿದ್ದ ಹುಣಸೇತೋಪನ್ನು ಜೀವ ವೈವಿಧ್ಯ ಪಾರಂಪರಿಕ ತಾಣ ಎಂದು ಘೋಷಿಸಿದೆ. ದೇವನಹಳ್ಳಿ ಚಕ್ಕೊತಾ ತಳಿಯ ಸರಂಕ್ಷಣೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾಯೋಜನೆ ಅನುಮೋದನೆ ಪಡೆದುಕೊಂಡಿದ್ದು ಚಕ್ಕೊತಾ ಸಸಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥಗೌಡ ತಿಳಿಸಿದರು. ಜೇನು ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳುವ ಜೊತೆಗೆ ಸಾವಯವ ಕೃಷಿ ಪ್ರೋತ್ಸಾಹಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.