ದೇವನಹಳ್ಳಿ: ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಮೇ 1ರಂದು ಭಗವಾನ್ ಬುದ್ಧ ಜಯಂತಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಮೇ 1ರ ಬೆಳಗ್ಗೆ 10ಕ್ಕೆ ದೇವನಹಳ್ಳಿ ತಾಲ್ಲೂಕು ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಅಂಬೇಡ್ಕರ್ ಭವನದವರೆಗೆ ಭಗವಾನ್ ಬುದ್ಧರ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಬುದ್ಧನ ಸಂದೇಶ ಕುರಿತ ಉಪನ್ಯಾಸ, ಸಮಾಜ ಸೇವೆಯಲ್ಲಿ ತೊಡಗಿರುವ ಗಣ್ಯರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆ ಮುದ್ರಣ ಹಾಗೂ ವಿತರಣೆ, ವೇದಿಕೆ ಸಿದ್ಧತೆ, ಕುಡಿಯುವ ನೀರು ಮತ್ತು ಉಪಹಾರದ ವ್ಯವಸ್ಥೆ ಸೇರಿದಂತೆ ಯಾವುದೇ ಲೋಪವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್, ಸಮಾಜದ ಮುಖಂಡರಾದ ಶ್ರೀನಿವಾಸ್, ಲೋಕೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-15-1901674734

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.