ದೇವನಹಳ್ಳಿ: ಬಕ್ರಿದ್ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯಬಹುದಾದ ಗೋವುಗಳ ಅಕ್ರಮ ಸಾಗಾಟ, ಅನಧಿಕೃತ ಕಸಾಯಿಖಾನೆಗಳ ಚಟುವಟಿಕೆ ಹಾಗೂ ಕಾನೂನುಬಾಹಿರ ಗೋಹತ್ಯೆ ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಶ್ರೀರಾಮ ಸೇನೆಯು ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

ತಾಲ್ಲೂಕಿನ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರನ್ನು ಭೇಟಿ ಮಾಡಿದ ಶ್ರೀರಾಮ ಸೇನೆ ಪದಾಧಿಕಾರಿಗಳು ಅಕ್ರಮ ಗೋವು ಸಾಗಾಟ ಮತ್ತು ಅಕ್ರಮ ಗೋಹತ್ಯೆ ತಡೆಯುವಂತೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಂಘಟನೆ ಪ್ರಚಾರಕ ಶ್ರೀನಿವಾಸ ಗುರೂಜಿ, ಗೋವುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಪೊಲೀಸ್ ಅಧಿಕಾರಿಗಳು ಅಕ್ರಮ ಚಟುವಟಿಕೆಗಳನ್ನು ತಡೆಯಬೇಕು ಎಂದರು.

ರಾಜ್ಯ ಸರ್ಕಾರವು ಪಶುಸಂಗೋಪನೆ ಮತ್ತು ಕೃಷಿಯನ್ನು ವೈಜ್ಞಾನಿಕ ರೀತಿಯಲ್ಲಿ ಸಂಘಟಿಸಿ, ಹಾಲು ಉತ್ಪಾದನೆಗೆ ಉಪಯುಕ್ತ ಜಾನುವಾರುಗಳ ಸಂರಕ್ಷಣೆ ಹಾಗೂ ಗೋಹತ್ಯೆ ನಿಷೇಧಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಪ್ರಾಣಿ ದಯಾ ಸಂಘ ಸೇರಿದಂತೆ ಸಂಬಂಧಿತ ಇಲಾಖೆಗಳ ಸಮನ್ವಯ ಸಭೆ ನಡೆಸಿ, ಬಕ್ರಿದ್ ಸಂದರ್ಭದಲ್ಲಿ ಜಾನುವಾರುಗಳ ಬಲಿ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಮಲ್ಲೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿಂಗಂ ಸುರೇಶ್, ಕವಿತಾ, ಸುಮಲತಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-15-946241250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.