ದೇವನಹಳ್ಳಿ: ಸಮಾಜ ಕಲ್ಯಾಣ ಇಲಾಖೆಯಡಿ ದೇವನಹಳ್ಳಿಯಲ್ಲಿ ₹7 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟನೆಯನ್ನು ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಮೂಲ ಸೌಕರ್ಯಗಳ ಜೊತೆಗೆ ಓದಲು ಒಳ್ಳೆಯ ವಾತಾವರಣ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಗುಣಮಟ್ಟದ ವಿದ್ಯಾಭ್ಯಾಸ ಪಡೆದುಕೊಳ್ಳಿ ಎಂದರು.

ಈ ಹಿಂದೆ ನಮ್ಮ ಸರ್ಕಾರ ಹೋಬಳಿಗೊಂದು ವಸತಿ ಶಾಲೆ ಸ್ಥಾಪಿಸಲು ತೀರ್ಮಾನಿಸಲಾಗಿತ್ತು. ಅದರಂತೆ ಈಗ ಎಲ್ಲಾ ಹೋಬಳಿಗಳಲ್ಲಿ ವಸತಿ ಶಾಲೆ ಜೊತೆಗೆ ಹಾಸ್ಟೆಲ್ ನಿರ್ಮಿಸಲಾಗುತ್ತಿದೆ. ಗುಣಮಟ್ಟದ ಊಟ ಒದಗಿಸಲಾಗುವುದು, ಜೊತೆಗೆ ಪರಿಣಿತ ಶಿಕ್ಷಕರು ಹಾಸ್ಟೆಲ್ಗೆ ಬಂದು ಭೋದನೆ ಮಾಡುತ್ತಾರೆ. ಹಾಗಾಗಿ ಇಲ್ಲಿ ಉತ್ತಮ ವಿದ್ಯಾಭ್ಯಾಸ ಪಡೆದುಕೊಳ್ಳುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷ ಶಾಂತಕುಮಾರ್, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಮಾಜಿ ಜಿ.ಪಂ ಸದಸ್ಯರಾದ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಸಹಾಯಕ ನಿರ್ದೇಶಕ ಓಲೇಕಾರ್, ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.