ದೇವನಹಳ್ಳಿ: ವಚನ ಸಾಹಿತ್ಯದ ಪ್ರಮುಖ ಸಂತ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಭಕ್ತಿಭಾವದಿಂದ ಆಚರಿಸಲಾಯಿತು.

ತಾಲ್ಲೂಕಿನ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಅವರು ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಅನುರಾಧ, ವೃತ್ತಿಯಲ್ಲಿ ನೇಕಾರರಾಗಿದ್ದ ದಾಸಿಮಯ್ಯ ಅವರು ಶಿವಭಕ್ತಿಯಲ್ಲಿ ತೊಡಗಿ, ತಮ್ಮ ಜೀವನದ ಮೂಲಕ ಭಕ್ತಿ ಮತ್ತು ಶ್ರಮದ ಮಹತ್ವ ಪ್ರತಿಪಾದಿಸಿದರು ಎಂದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಶ್ರೀಕಾಂತ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೋಹನ್, ಮುಜರಾಯಿ ತಹಶೀಲ್ದಾರ್ ಹೇಮಾವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-15-89484134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.