ದೇವನಹಳ್ಳಿ: ತಾಲ್ಲೂಕಿನ ವಿಶ್ವನಾಥಪುರ ಗ್ರಾಮದಲ್ಲಿ ಶುಕ್ರವಾರ ವರದಕ್ಷಿಣೆ ತಡೆಗಾಗಿ ‘ವರದಕ್ಷಿಣೆ: ಒಂದು ಸಾಮಾಜಿಕ ಪಿಡುಗು’ ಧ್ಯೇಯವಾಕ್ಯದಡಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಹಾಗೂ ವಿಶ್ವನಾಥಪುರ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಮಾನವ ಸರಳಿ ರಚಿಸಿ ಅರಿವು ಮೂಡಿಸಿದರು.

ವರದಕ್ಷಿಣೆ ಪದ್ಧತಿ ಸಮಾಜಕ್ಕೆ ಗಂಭೀರ ಪಿಡುಗಾಗಿದ್ದು, ಅನೇಕ ಮಹಿಳೆಯರ ಬದುಕು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಭಾರತ ಸರ್ಕಾರವು 1961ರಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಗೆ ತಂದಿದ್ದು, ವರದಕ್ಷಿಣೆ ಕೇಳುವುದು, ನೀಡುವುದು ಹಾಗೂ ಸ್ವೀಕರಿಸುವುದು ಶಿಕ್ಷಾರ್ಹ ಅಪರಾಧ. ಇಂತಹ ಕೃತ್ಯಗಳಿಗೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶವಿದೆ. ವರದಕ್ಷಿಣೆ ಕಿರುಕುಳ ಪ್ರಕರಣಗಳ ಬಗ್ಗೆ ತಕ್ಷಣವೇ 181 ಮಹಿಳಾ ಸಹಾಯವಾಣಿಗೆ ಕರೆ ಮಾಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎನ್.ಎಂ.ಜಗದೀಶ್ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುದ್ದಣ್ಣ ಅವರು ವರದಕ್ಷಿಣೆ ನಿಷೇಧ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಭಿಕರಿಗೆ ಮಾಹಿತಿ ನೀಡಿದರು.

1961ರಲ್ಲಿ ಜಾರಿಗೆ ಬಂದ ವರದಕ್ಷಿಣೆ ನಿಷೇಧ ಕಾಯ್ದೆಯ ಬಗ್ಗೆ ಇಂದಿಗೂ ಸಾರ್ವಜನಿಕರಲ್ಲಿ ಅರಿವು ಇಲ್ಲದಿರುವುದು ವಿಷಾದನೀಯ. ಗ್ರಾಮೀಣ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಜಿಲ್ಲಾ ನಿರೂಪಣಾಧಿಕಾರಿ ರಮೇಶ್ ಹೇಳಿದರು.

ಜೊತೆಗೆ ವರದಕ್ಷಿಣೆ, ಬಾಲ್ಯ ವಿವಾಹ, ಮರ್ಯಾದ ಹತ್ಯೆ, ಲಿಂಗಾನುಪಾತ ಹಾಗೂ ಹೆಣ್ಣುಮಕ್ಕಳ ಶಿಕ್ಷಣದ ಮಹತ್ವ ಕುರಿತು ಬೆಳಕು ಚೆಲ್ಲಿದರು.

ವಿಶ್ವನಾಥಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಕ್ಷ್ಮಿದೇವಮ್ಮ, ಅಧೀಕ್ಷಕ ಡಿ.ವಿನೋದ್ ರಾಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಹಿರಿಯ ಮೇಲ್ವಿಚಾರಕಿ ಹೇಮಾವತಿ ಬಾಯಿ, ಮೇಲ್ವಿಚಾರಕಿ ಮುನಿ ಲಕ್ಷ್ಮಮ್ಮ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-15-204903769

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.