ದೇವನಹಳ್ಳಿ: ಯುವ ಪೀಳಿಗೆಯನ್ನು ಗುರಿಯಾಗಿಸಿಕೊಂಡು ಡ್ರಗ್ ಮಾಫಿಯಾಗಳು ತಮ್ಮ ಜಾಲವನ್ನು ವ್ಯಾಪಕವಾಗಿ ವಿಸ್ತರಿಸುತ್ತಿವೆ. ಯುವ ಸಮೂಹವು ಈ ಮಾಯಾಜಾಲಕ್ಕೆ ಸಿಲುಕದೆ ಜಾಗೃತರಾಗಿರಬೇಕು ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್ ಹೇಳಿದರು.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಹಾಸ್ಟೆಲ್ ವಾರ್ಡನ್ಗಳಿಗೆ ಸೋಮವಾರ ಆಯೋಜಿಸಿದ್ದ ‘ಮಾದಕ ವಸ್ತುಗಳ ಬಳಕೆ, ದುಷ್ಪರಿಣಾಮ ಮತ್ತು ನಿಷೇಧ’ ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚುತ್ತಿದ್ದು, ಎಸ್ಎಸ್ಎಲ್ಸಿ , ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳೇ ಡ್ರಗ್ ಪೆಡ್ಲರ್ಗಳ ಪ್ರಮುಖ ಗುರಿ. ಮಾದಕ ವಸ್ತುಗಳು ಎಲ್ಲಿಂದ ಸರಬರಾಜಾಗುತ್ತವೆ. ಯಾರು ಮಾರಾಟ ಮಾಡುತ್ತಾರೆ ಎಂಬುದು ನಿಗೂಢವಾಗಿದ್ದು, ಯುವಕರು ಈ ಜಾಲಕ್ಕೆ ಸಿಲುಕದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಮದ್ಯಪಾನ, ಧೂಮಪಾನ ಹಾಗೂ ಮಾದಕ ವಸ್ತುಗಳ ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ವ್ಯಕ್ತಿಯ ಜೊತೆಗೆ ಕುಟುಂಬದ ಬದುಕನ್ನೂ ಹಾಳುಮಾಡುತ್ತದೆ. ಪೋಷಕರು ಮಕ್ಕಳ ನಡವಳಿಕೆ ಮತ್ತು ದಿನನಿತ್ಯದ ಚಟುವಟಿಕೆಗಳ ಮೇಲೆ ಗಮನಹರಿಸಬೇಕು. ಹಾಸ್ಟೆಲ್, ಶಾಲೆ ಮತ್ತು ಕಾಲೇಜುಗಳಲ್ಲಿ ವಾರ್ಡನ್ಗಳು, ಶಿಕ್ಷಕರು ಹಾಗೂ ಪ್ರಾಂಶುಪಾಲರು ವಿದ್ಯಾರ್ಥಿಗಳ ಚಲನವಲನವನ್ನು ಗಮನಿಸಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ಮನೋರೋಗ ತಜ್ಞ ಡಾ. ಗಿರೀಶ್ ಕುಮಾರ್, ಕುತೂಹಲ, ಜೊತೆಯವರ ಒತ್ತಾಯ, ನಕಾರಾತ್ಮಕ ಭಾವನೆಗಳು, ಒಂಟಿತನ ಹಾಗೂ ತಾತ್ಕಾಲಿಕ ಖುಷಿಗಾಗಿ ಅನೇಕರು ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಪ್ರಮುಖ ಅಂಗಾಂಗಗಳಿಗೆ ಹಾನಿ, ಮಾನಸಿಕ ಖಿನ್ನತೆ, ಕುಟುಂಬ ಸಮಸ್ಯೆ, ಅಪರಾಧ ಚಟುವಟಿಕೆ ಹಾಗೂ ಆಯುಷ್ಯ ಕಡಿಮೆಯಾಗುವಂತಹ ದುಷ್ಪರಿಣಾಮ ಉಂಟಾಗುತ್ತವೆ ಎಂದು ವಿವರಿಸಿದರು.

ವ್ಯಸನದಿಂದ ಹೊರಬರಲು ಮನೋರೋಗ ತಜ್ಞರನ್ನು ಸಂಪರ್ಕಿಸುವುದು, ಸಮೀಪದ ವ್ಯಸನಮುಕ್ತ ಕೇಂದ್ರಗಳಿಗೆ ಭೇಟಿ ನೀಡುವುದು ಹಾಗೂ ಟೆಲಿ ಮನಸ್ ಉಚಿತ ಸಹಾಯವಾಣಿ 14416ಕ್ಕೆ ಕರೆ ಮಾಡಿ ಸಲಹೆ ಪಡೆಯಬಹುದು ಎಂದು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪ್ರೇಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಯಶ್ರೀ ಹೆಂಡೇಗಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನಾಶ್, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಪಾಂಡುರಂಗ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-15-436955434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.