ದೇವನಹಳ್ಳಿ: ಪಟ್ಟಣದ ಬೇಕರಿ ಹಾಗೂ ದಿನಸಿ ಅಂಗಡಿಗಳ ಮೇಲೆ ದೇವನಹಳ್ಳಿ ಪುರಸಭೆ ಅಧಿಕಾರಿಗಳು ಮತ್ತು ತಹಶೀಲ್ದಾರ್ ಅನಿಲ್ ನೇತೃತ್ವದಲ್ಲಿ ಮಂಗಳವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಹಲವು ಅಂಗಡಿಗಳಲ್ಲಿ ಅವಧಿ ಮೀರಿದ ತಿನಿಸುಗಳು ಹಾಗೂ ಪ್ಯಾಕೇಟ್ ಆಹಾರ ಪದಾರ್ಥಗಳು ಪತ್ತೆಯಾದವು. ಕೆಲವು ಕಡೆಗಳಲ್ಲಿ ಯಾವುದೇ ಅಧಿಕೃತ ಸಂಸ್ಥೆಗಳ ಲೇಬಲ್ ಇಲ್ಲದ ಪೊಟ್ಟಣಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಸಂಬಂಧಿತ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಆಹಾರದ ಗುಣಮಟ್ಟ ಕಾಪಾಡದ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಅವಧಿ ಮೀರಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಕೆಲ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚಿಸಲಾಯಿತು. ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಕಾನೂನು ಕ್ರಮ ಕೈಗೊಂಡು ದಂಡ ಪಾವತಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಶೀಲನೆ ವೇಳೆ ಕೆಲವೆಡೆ ಅಂಗಡಿ ಮಾಲೀಕರು ಮತ್ತು ಅಧಿಕಾರಿಗಳ ನಡುವೆ ವಾಗ್ವಾದವೂ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.