ದೇವನಹಳ್ಳಿ: ಕೃಷಿ ಹೊಂಡಗಳಲ್ಲಿ ಆಕಸ್ಮಿಕ ಸಾವು ತಡೆಗಟ್ಟಲು ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ರೈತರು ಕಡ್ಡಾಯವಾಗಿ ತಂತಿ ಬೇಲಿ ಮತ್ತು ಸೂಚನಾ ಫಲಕ ಅಳವಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ಕಲಾವತಿ ಬಿ.ಜಿ. ತಿಳಿಸಿದ್ದಾರೆ.

ಕೃಷಿ ಭಾಗ್ಯ ಯೋಜನೆಯಡಿ ತಂತಿ ಬೇಲಿ ಅಳವಡಿಕೆಗೆ ಸಾಮಾನ್ಯ ವರ್ಗದ ರೈತರಿಗೆ ಶೇ 40 ಹಾಗೂ ಎಸ್.ಸಿ, ಎಸ್.ಟಿ ರೈತರಿಗೆ ಶೇ 50 ಸಹಾಯಧನ ನೀಡಲಾಗುತ್ತದೆ. ಸೂಚನಾ ಫಲಕ ಅಳವಡಿಕೆಗೆ ₹2,000 ಸಹಾಯಧನವಿದ್ದು, ಯೋಜನೆಯ ಉಳಿದ ಸಹಾಯಧನವನ್ನೂ ಎಲ್ಲಾ ಘಟಕಗಳ ಅಳವಡಿಕೆಯ ಬಳಿಕ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕೃಷಿ ಇಲಾಖೆಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-15-1753846547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.