ದೇವನಹಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ನೌಕರರು, ಹಲವು ತಿಂಗಳಿಂದ ಬಾಕಿ ಉಳಿದಿರುವ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಿದರು. ಬಳಿಕ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಕಳೆದ ಡಿಸೆಂಬರ್ 20ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳು ನೀಡಿದ ಭರವಸೆಗಳನ್ನು ಇನ್ನೂ ಈಡೇರಿಸಿಲ್ಲ. 19 ಬೇಡಿಕೆಗಳಲ್ಲಿ ಪ್ರಮುಖವಾದ 7 ಬೇಡಿಕೆಗಳನ್ನು ಶೀಘ್ರ ಪರಿಹರಿಸುವುದಾಗಿ ಹೇಳಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಷಾದನೀಯ ಎಂದು ಹೇಳಿದರು.

ಮುಖ್ಯ ಬೇಡಿಕೆಗಳಲ್ಲಿ ಎಲ್ಲಾ ನೌಕರರಿಗೆ ₹5,000 ವೇತನ ಹೆಚ್ಚಳ, ನಿವೃತ್ತಿ ಅಥವಾ ನಿಧನ ಹೊಂದಿದ ನೌಕರರ ಕುಟುಂಬಕ್ಕೆ ₹6 ಲಕ್ಷ ಪರಿಹಾರ, ಸೇವಾ ಹಿರಿತನ ಆಧಾರಿತ ವೇತನ, ಸ್ವಚ್ಛವಾಹಿನಿ ನೌಕರರ ಸಮಸ್ಯೆಗಳ ಪರಿಹಾರ, ಪ್ರತಿ ಪಂಚಾಯತಿಗೆ ಲೆಕ್ಕ ಸಹಾಯಕ ಹುದ್ದೆ ಭರ್ತಿ, ದೀರ್ಘಕಾಲ ಸೇವೆ ಸಲ್ಲಿಸಿರುವ ಡೇಟಾ ಎಂಟ್ರಿ ಆಪರೇಟರ್ಗಳಿಗೆ ಮಾನ್ಯತೆ ಹಾಗೂ ಹೆಚ್ಚುವರಿ ನೇಮಕಾತಿ ಸೇರಿವೆ. ಈ ಮನವಿಗೂ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ‘ಬೆಂಗಳೂರು ಚಲೋ’ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ರಾಜ್ಯ ಗ್ರಾಪಂ ನೌಕರರ ಸಂಘದ ದ ಟಿ.ಎಂ. ನಟರಾಜು, ಗೋಪಾಲಕೃಷ್ಣ ಹರಳಹಳ್ಳಿ, ಎಂ.ಶ್ರೀನಿವಾಸ್, ಮೋಹನ್ ಬಾಬು ಎಚ್.ಎನ್., ವಿಶ್ವನಾಥ್, ಮುರಳೀಶ್, ಮುನಿರಾಜು, ಪಿ.ಎ. ವೆಂಕಟೇಶ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-15-168066568

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.