ದೇವನಹಳ್ಳಿ: ಗ್ರಾಮೀಣ ಹಾಗೂ ದುರ್ಗಮ ಪ್ರದೇಶಗಳ ಜನರಿಗೆ ತ್ವರಿತ ಆರೋಗ್ಯ ಸೇವೆ ತಲುಪಿಸಲು ಸಂಚಾರಿ ಇ-ಬೈಕ್ಗಳು ಸಹಕಾರಿ ಆಗಲಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸಂತಿ ಅಮರ್ ಹೇಳಿದರು.

‘ಆಪ್ಟಮ್ ಇಂಡಿಯಾ’, ‘ಯುನೈಟೆಡ್ ವೇ ಬೆಂಗಳೂರು’ ಸಂಸ್ಥೆಗಳ ಸಿಎಸ್ಆರ್ ಅನುದಾನದಡಿ ನೀಡಿರುವ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 45 ಇ-ಬೈಕ್ ಹಸ್ತಾಂತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರ ಈಗಾಗಲೇ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ಯೋಜನೆಯನ್ನು ಜಾರಿಗೊಳಿಸಿದ್ದು, ಅದಕ್ಕೆ ಪೂರಕವಾಗಿ ಇ-ಬೈಕ್ಗಳ ವಿತರಣೆ ಗ್ರಾಮೀಣ ಆರೋಗ್ಯ ಸೇವೆಗಳಿಗೆ ಮತ್ತಷ್ಟು ಬಲ ನೀಡಲಿದೆ ಎಂದರು.

ಗ್ರಾಮೀಣ ಭಾಗಗಳಲ್ಲಿ ಸಾರಿಗೆ ಸೌಲಭ್ಯಗಳ ಕೊರತೆಯಿಂದ ತುರ್ತು ಆರೋಗ್ಯ ಸೇವೆಗಳಲ್ಲಿ ವಿಳಂಬ ಉಂಟಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಆರೋಗ್ಯ ಸಿಬ್ಬಂದಿಗೆ ಇ-ಬೈಕ್ಗಳು ಪರಿಣಾಮಕಾರಿಯಾಗಿ ನೆರವಾಗಲಿವೆ. ಆಸ್ಪತ್ರೆಗೆ ತೆರಳಲು ಸಾಧ್ಯವಾಗದ ರೋಗಿಗಳಿಗೆ ಮನೆಮನೆಗೆ ತೆರಳಿ ಚಿಕಿತ್ಸೆ, ಔಷಧಿ ವಿತರಣೆ ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸಲು ಇವು ಮಹತ್ವದ ಪಾತ್ರವಹಿಸಲಿವೆ ಎಂದು ಹೇಳಿದರು.

ಇ-ಬೈಕ್ಗಳು ಪರಿಸರ ಸ್ನೇಹಿಯಾಗಿದ್ದು, ವಾಯುಮಾಲಿನ್ಯ ನಿಯಂತ್ರಣಕ್ಕೂ ಸಹಕಾರಿಯಾಗಲಿವೆ.ವಾಹನಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಅಗತ್ಯವಿರುವ ಪ್ರದೇಶಗಳಲ್ಲಿ ಸಮಯೋಚಿತವಾಗಿ ಆರೋಗ್ಯ ಸೇವೆ ನೀಡಬೇಕು ಎಂದು ಆರೋಗ್ಯ ಸಿಬ್ಬಂದಿಗೆ ಸಲಹೆನೀಡಿದರು.

ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕುಗಳ ಗ್ರಾಮೀಣ ಜನರಿಗೆ ಈ ಸೇವೆಯಿಂದ ಅನುಕೂಲವಾಗಲಿದೆ. ವಿಶೇಷವಾಗಿ ಬಡವರು, ಮಧ್ಯಮ ವರ್ಗದವರು ಮತ್ತು ಆಸ್ಪತ್ರೆಗೆ ತೆರಳಲು ಸಾಧ್ಯವಾಗದವರಿಗೆ ತುರ್ತು ಆರೋಗ್ಯ ಸೇವೆ ಸುಲಭವಾಗಿ ದೊರೆಯಲಿದೆ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಲಕ್ಕಾ ಕೃಷ್ಣ ರೆಡ್ಡಿ, ಆಪ್ಟಮ್ ಇಂಡಿಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಉಮಾ ರತ್ನಮ್ ಕೃಷ್ಣ, ಯುನೈಟೆಡ್ ವೇ ಬೆಂಗಳೂರು ಸಂಸ್ಥೆಯ ಸಿಇಒ ರಾಜೇಶ್ ಕೃಷ್ಣನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-15-947386321

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.