ದೇವನಹಳ್ಳಿ: ಪಟ್ಟಣ ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆಯೇ ಕಾಣದಷ್ಟು ನೀರು ಹರಿದ ಪರಿಣಾಮ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.

ಮಳೆಯ ತೀವ್ರತೆ ಹೆಚ್ಚಿದ್ದರಿಂದ ವಾಹನ ಚಾಲಕರು ಮುನ್ನೆಚ್ಚರಿಕೆಯಾಗಿ ಹಳದಿ ದೀಪಗಳನ್ನು ಬೆಳಗಿಸಿಕೊಂಡು ನಿಧಾನಗತಿಯಲ್ಲಿ ವಾಹನ ಚಲಾಯಿಸಿದರು. ಹೆದ್ದಾರಿಯ ಹಲವು ಭಾಗಗಳಲ್ಲಿ ನೀರು ಸಂಗ್ರಹವಾಗಿದ್ದರಿಂದ ಸಂಚಾರದ ವೇಗ ಕುಗ್ಗಿ ವಾಹನಗಳ ಸಾಲುಗಳು ಉಂಟಾಗಿದ್ದವು.

ಸಾದಹಳ್ಳಿ ಟೋಲ್ ಪ್ಲಾಜಾ ಸಮೀಪ ಮಳೆ ನೀರು ನಿಂತಿದ್ದ ಪರಿಣಾಮ ಕೆಲವು ಟೋಲ್ ಬೂತ್ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇದರಿಂದ ಟೋಲ್ ಪ್ಲಾಜಾದ ಎರಡೂ ಬದಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿ ಸಂಚಾರ ನಿಧಾನಗೊಂಡಿತು. ಹಲವು ವಾಹನಗಳು ಟೋಲ್ ದಾಟಲು ಹೆಚ್ಚಿನ ಸಮಯ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

ದೇವನಹಳ್ಳಿ ಪಟ್ಟಣದ ಸೂಲಿಬೆಲೆ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮುಂಭಾಗ ಮಳೆ ನೀರು ರಸ್ತೆ ಮೇಲೆ ನಿಂತಿದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಓಡಾಡಲು ಪರದಾಡಿದರು. ರಸ್ತೆಯ ಕೆಲ ಭಾಗಗಳು ಜಲಾವೃತಗೊಂಡ ಪರಿಣಾಮ ಸ್ಥಳೀಯರು ಸುರಕ್ಷಿತವಾಗಿ ಸಂಚರಿಸಲು ಹರಸಾಹಸ ಪಡಬೇಕಾಯಿತು.

ಇದೇ ವೇಳೆ ಪಾದಚಾರಿ ಮೇಲ್ಸೇತುವೆಗಳ ಕೆಳಭಾಗದಲ್ಲಿ ಮಳೆಯಿಂದ ರಕ್ಷಣೆ ಪಡೆಯಲು ದ್ವಿಚಕ್ರ ವಾಹನ ಸವಾರರು ವಾಹನಗಳನ್ನು ನಿಲ್ಲಿಸಿಕೊಂಡಿದ್ದರು. ಇದರಿಂದ ರಸ್ತೆಯಲ್ಲಿನ ಸಂಚಾರಕ್ಕೆ ಲಭ್ಯವಿದ್ದ ಸ್ಥಳಾವಕಾಶ ಮತ್ತಷ್ಟು ಕಡಿಮೆಯಾಗಿ ವಾಹನಗಳ ಓಡಾಟ ಅಸ್ತವ್ಯಸ್ತಗೊಂಡಿತು.

ಸಾದಹಳ್ಳಿ ಟೋಲ್ನಿಂದ ವಿಮಾನ ನಿಲ್ದಾಣದತ್ತ ಸಾಗುವ ರಸ್ತೆಯಲ್ಲಿ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಏರ್ಪೋರ್ಟ್ ಸಿಟಿಯ ಮೊದಲ ಜಂಕ್ಷನ್ ಬಳಿ ರಸ್ತೆ ಬಂದ್ ಮಾಡಲಾಗಿದೆ. ಇದರಿಂದ ವಿಮಾನ ನಿಲ್ದಾಣದ ಟರ್ಮಿನಲ್ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರು ಪರ್ಯಾಯ ಮಾರ್ಗಗಳನ್ನು ಅವಲಂಬಿಸಬೇಕಾಗಿ ಬಂದಿದ್ದು, ಸಂಚಾರ ದಟ್ಟಣೆಯಿಂದ ಟರ್ಮಿನಲ್ಗಳಿಗೆ ಸಮಯಕ್ಕೆ ತಲುಪಲು ಹರಸಾಹಸ ಪಡುವಂತಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-15-285796820

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.