ದೇವನಹಳ್ಳಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೀರಿನ ಕೊರತೆಯಿಂದ ಕಳೆದ ಶುಕ್ರವಾರದಿಂದ ಡಯಾಲಿಸಿಸ್ ಸೇವೆ ಸ್ಥಗಿತಗೊಂಡಿದೆ. ಚಿಕಿತ್ಸೆಗಾಗಿ ಬರುತ್ತಿರುವ ರೋಗಿಗಳನ್ನು ವಾಪಸ್ ಕಳುಹಿಸಲಾಗುತ್ತಿದೆ ಎಂದು ರೋಗಿಗಳು ಹಾಗೂ ಸಾರ್ವಜನಿಕರು ಸೋಮವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಅವಲಂಬಿಸಿರುವ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯ ಸೌಲಭ್ಯಗಳಿದ್ದರೂ ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ವಿಫಲವಾಗಿರುವುದು ರೋಗಿಗಳ ಸಂಕಷ್ಟಕ್ಕೆ ಕಾರಣವಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚ ಭರಿಸಲಾಗದ ರೋಗಿಗಳು ಸರ್ಕಾರಿ ಆಸ್ಪತ್ರೆಗೆ ಬಂದಾಗ ಮೂಲ ಸೌಲಭ್ಯಗಳ ಕೊರತೆಯಿಂದ ಚಿಕಿತ್ಸೆ ಸಿಗದೆ ಪರದಾಡುವಂತಾಗಿದೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ಈಚೆಗೆ ಪುರಸಭೆ ವತಿಯಿಂದ ಆಸ್ಪತ್ರೆ ಆವರಣದಲ್ಲಿ ನೂತನ ಕೊಳವೆಬಾವಿ ಕೊರೆಸಲಾಗಿದೆ. ಉತ್ತಮ ನೀರು ಲಭ್ಯವಿದೆ. ಕೊಳವೆ ಬಾವಿಗೆ ಪಂಪ್ ಅಳವಡಿಸಿ ನೀರನ್ನು ನೆಲ ಸಂಪ್ಗೆ ಸಂಗ್ರಹಿಸಲಾಗುತ್ತಿದೆ. ಅಲ್ಲಿಂದ ತಾಯಿ–ಮಗು ಆಸ್ಪತ್ರೆ ಸೇರಿದಂತೆ ವಿವಿಧ ವಿಭಾಗಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ, ನೆಲ ಸಂಪ್ನಿಂದ ನೀರು ಸರಬರಾಜು ಮಾಡುವ ಮೋಟಾರು ದುರಸ್ತಿಗೊಂಡ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನೀರಿನ ಪೂರೈಕೆ ಅಸ್ತವ್ಯಸ್ತಗೊಂಡಿದೆ.

ಶುಕ್ರವಾರವೇ ಮೋಟಾರ್ ದುರಸ್ತಿಯಾಗಿದ್ದರೂ ಅದನ್ನು ತ್ವರಿತವಾಗಿ ಸರಿಪಡಿಸಲು ಕ್ರಮಕೈಗೊಳ್ಳದಿರುವುದು ಆಸ್ಪತ್ರೆ ಆಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ರೋಗಿಗಳು ಆರೋಪಿಸಿದ್ದಾರೆ. ಡಯಾಲಿಸಿಸ್ ಘಟಕ ಮಾತ್ರವಲ್ಲದೆ ಆಸ್ಪತ್ರೆ ಆವರಣದಲ್ಲಿರುವ ತಾಯಿ–ಮಗು ಆರೈಕೆ ಕೇಂದ್ರಕ್ಕೂ ಇದರ ಪರಿಣಾಮ ಎದುರಾಗಿದೆ.

ಗಲೀಜು ನೀರಿನ ಬಳಕೆ ಆರೋಪ: ಆಸ್ಪತ್ರೆಯಲ್ಲಿ ನೀರು ಸಂಗ್ರಹಿಸುವ ನೆಲ ಸಂಪ್ ಸ್ವಚ್ಛತೆ ಕೊರತೆಯಿಂದ ಗಲೀಜಾಗಿದೆ. ಅದೇ ನೀರನ್ನು ಆಸ್ಪತ್ರೆ ಬಳಕೆಗೆ ಉಪಯೋಗಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ನೀರಿನ ಸಮಸ್ಯೆ ಉಂಟಾಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಕಾಲದಲ್ಲಿ ಮಾಹಿತಿ ನೀಡಿ ಸಮಸ್ಯೆ ಪರಿಹರಿಸಲು ಆಸ್ಪತ್ರೆ ಆಡಳಿತ ಮುಂದಾಗಿಲ್ಲ. ರೋಗಿಗಳು ಆಕ್ರೋಶ ವ್ಯಕ್ತಪಡಿಸಿದ ಬಳಿಕವೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ದುರಸ್ತಿ ಕಾರ್ಯ ಆರಂಭಿಸುವ ಕ್ರಮಕೈಗೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-15-648987282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.