ದೇವನಹಳ್ಳಿ: ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಏಪ್ರಿಲ್ 6ರಂದು ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ಅನುರಾಧ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪ್ರತಿಮೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಬೆಳಿಗ್ಗೆ 10 ಗಂಟೆಗೆ ಪುತ್ಥಳಿ ಲೋಕಾರ್ಪಣೆ ನಡೆಯಲಿದೆ. ಬಳಿಕ ಸಭಾಂಗಣದಲ್ಲಿ ಸಾಂಸ್ಕೃತಿಕ ಹಾಗೂ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ವಿವಿಧ ಗಣ್ಯರು, ಸಂಸದರು, ಜನಪ್ರತಿನಿಧಿಗಳು ಮತ್ತು ಮಠಾಧೀಶರು ಆಗಮಿಸುವ ನಿರೀಕ್ಷೆಯಿದ್ದು, ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರಿಗೆ ತಲುಪಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ವೇದಿಕೆ ಅಲಂಕಾರ, ಉಪಹಾರ ವ್ಯವಸ್ಥೆ ಹಾಗೂ ಭದ್ರತಾ ಬಂದೋಬಸ್ತ್ ವ್ಯವಸ್ಥೆಗಳನ್ನು ಸಮರ್ಪಕವಾಗಿ ಮಾಡುವಂತೆ ಸಂಬಂಧಿತ ಇಲಾಖೆಗಳಿಗೂ ನಿರ್ದೇಶನ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಡಿ.ಅಶೋಕ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಬಸವೇಶ್ವರ ಪ್ರತಿಮೆ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ವಿ. ಮಂಜುನಾಥ್, ಅಧ್ಯಕ್ಷ ಎಸ್. ರಮೇಶ್, ಜಿಲ್ಲಾಧಿಕಾರಿ ಕಚೇರಿ ಸಹಾಯಕ ರಾಜೀವ್ ಸುಲೋಚನ ಉಪಸ್ಥಿತರಿದ್ದರು.

450 ಕೆ.ಜಿ ಕಂಚು ಬಳಕೆ: ಜಿಲ್ಲಾಡಳಿತ ಭವನದ ಆವರಣದಲ್ಲಿ ನಿರ್ಮಿಸಿರುವ ಬಸವೇಶ್ವರರ ಮಂಟಪವು 28 ಅಡಿ ಎತ್ತರವಾಗಿದ್ದು 5 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಸುಮಾರು 450 ಕೆಜಿ ಕಂಚು ಬಳಸಿ ನಿರ್ಮಿಸಲಾಗಿದೆ. ಈ ಕಾಮಗಾರಿಗೆ ಅಂದಾಜು ₹80 ಲಕ್ಷ ವೆಚ್ಚವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ಅನುರಾಧ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.