ದೇವನಹಳ್ಳಿ: ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಜೆಡಿಎಸ್ ಕಾರ್ಯಕರ್ತರು ಈಗಿನಿಂದಲೇ ಸಂಘಟನೆ ಬಲಪಡಿಸಬೇಕು ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಎಸ್ಸಿ ಘಟಕದ ನೂತನ ಪದಾಧಿಕಾರಿಗಳ ನೇಮಕಾತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿ, ‘ಪರಿಶಿಷ್ಟ ಜಾತಿಯ ವಿವಿಧ ಸಮುದಾಯಗಳ ಮುಖಂಡರು ಒಗ್ಗಟ್ಟಿನಿಂದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಬೇಕು. ದೇವನಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಭರ್ಜರಿ ಗೆಲುವು ಸಾಧಿಸಬೇಕು. ಇದಕ್ಕಾಗಿ ನೂತನ ಪದಾಧಿಕಾರಿಗಳು ಹಾಗೂ ಮೂಲ ಸಂಸ್ಥೆಯ ಮುಖಂಡರು ಹಗಲಿರುಳು ಶ್ರಮಿಸಿ ಪಕ್ಷವನ್ನು ತಳಮಟ್ಟದಿಂದ ಕಟ್ಟಬೇಕು ಎಂದು ಹೇಳಿದರು.

ತಾಲ್ಲೂಕು ಎಸ್.ಸಿ ಘಟಕದ ಪುನರ್ರಚನೆಗೆ ಕರೆ ನೀಡಿದಾಗ ಹಿರಿಯ ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದರು. ತಾಲ್ಲೂಕು ಘಟಕಕ್ಕೆ ರಾಮಣ್ಣ ಹಾಗೂ ಜಿಲ್ಲಾ ಘಟಕಕ್ಕೆ ಕಾರ್ಯಕರ್ತರ ಬೆಂಬಲದೊಂದಿಗೆ ವಿದ್ಯಾವಂತ ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಸಂಘಟನೆಗೆ ಹೆಚ್ಚಿನ ಬಲ ದೊರಕಿದೆ ಎಂದು ಜಿಲ್ಲಾಧ್ಯಕ್ಷ ಕೆ.ವಿ. ಮಂಜುನಾಥ್ ಹೇಳಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮಹೇಶ್ ಎಸ್., ಪ್ರಧಾನ ಕಾರ್ಯದರ್ಶಿ ಗೋಣೂರು ಮನೋಹರ್, ಕಾರ್ಯಾಧ್ಯಕ್ಷ ಜಿ.ಎ. ರವೀಂದ್ರ, ಗೌರವ ಅಧ್ಯಕ್ಷ ಸಂಪಂಗಪ್ಪ, ಉಪಾಧ್ಯಕ್ಷ ಎಸ್. ನಾಗೇಶ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ನೂತನ ಪದಾಧಿಕಾರಿಗಳು: ಕಾರ್ಯಾಧ್ಯಕ್ಷರಾಗಿ ಶಿವಾನಂದ, ಪ್ರಧಾನ ಕಾರ್ಯದರ್ಶಿಯಾಗಿ ತಿರುಮಲೇಶ್ ಸಿ., ಕಾರ್ಯದರ್ಶಿಯಾಗಿ ಮೂರ್ತಿ ಡಿ.ಟಿ, ಹಿರಿಯ ಉಪಾಧ್ಯಕ್ಷರಾಗಿ ಚಂದ್ರು, ನಾಗರಾಜು, ಮಾರಪ್ಪ, ಹರೀಶ್ ನಾಯಕ್, ಸಿದ್ದಪ್ಪ, ನಾರಾಯಣಸ್ವಾಮಿ, ಮೋಹನ್, ಮುನಿಕೃಷ್ಣ, ನರಸಿಂಹಮೂರ್ತಿ, ಜನಕಮಣಿ, ನರಸಿಂಹಯ್ಯ (ಬಾಬು), ಭರತ್, ಚನ್ನಕೃಷ್ಣ, ಶ್ರೀನಿವಾಸ್, ಡಿ.ಎಂ. ನಾಗರಾಜು ಮತ್ತು ನಾಗೇಶ್ ನೇಮಕಗೊಂಡಿದ್ದಾರೆ. ಸಂಘಟನಾ ಕಾರ್ಯದರ್ಶಿಯಾಗಿ ಮುರಳೀಧರ್, ನಾರಾಯಣ (ಅಪ್ಪಿ), ಮಂಜುನಾಥ, ಸಂತೋಷ್, ವೆಂಕಟೇಶ್, ರಾಜಶೇಖರ್, ಕಿಶೋರ್, ಮಧು, ಚಂದ್ರು, ಸತೀಶ್, ಮುನಿರಾಜು, ಸೋಮಶೇಖರ್ ಹಾಗೂ ಮಹೇಶ್ ಆಯ್ಕೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-15-752308210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.