ದೇವನಹಳ್ಳಿ: ಸರ್ಕಾರಿ ಇಲಾಖೆಗಳ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ನಡೆಸಲು ಕೆ–ಜಿಐಎಸ್ 2.0 ಪೋರ್ಟಲ್ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್. ಅನುರಾಧ ಹೇಳಿದರು.

ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಸಹಯೋಗದಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ‘ಕೆ–ಜಿಐಎಸ್ 2.0’ ಸ್ಥಳೀಯ ಆಡಳಿತಕ್ಕಾಗಿ ಜಿಐಎಸ್ ಆಧಾರಿತ ಮಾಹಿತಿ ತಲುಪಿಸುವ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೆ–ಜಿಐಎಸ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್ನಲ್ಲಿ ವಿವಿಧ ಇಲಾಖೆಗಳ ದತ್ತಾಂಶಗಳನ್ನು ಸಮಗ್ರವಾಗಿ ಸಂಗ್ರಹಿಸಲಾಗಿದೆ. ಸಂಬಂಧಿತ ಇಲಾಖೆಗಳು ತಮಗೆ ಅಗತ್ಯ ಮಾಹಿತಿಯನ್ನು ತ್ವರಿತವಾಗಿ ಪಡೆಯಬಹುದು ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಶಾಲೆಯ ಮಾಹಿತಿ ಬೇಕಾದರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ಅಗತ್ಯವಿಲ್ಲ. ಪೋರ್ಟಲ್ ಮೂಲಕ ಶಾಲೆಯ ಜಮೀನು ವಿಸ್ತೀರ್ಣ, ಪಹಣಿ ವಿವರ, ಗಡಿ ರೇಖೆ ಸೇರಿದಂತೆ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ. ಇದೇ ರೀತಿ ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು, ಸರ್ಕಾರಿ ಜಮೀನು, ಕೆರೆ-ಕುಂಟೆಗಳು, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಮಾಹಿತಿಯೂ ಒಂದೇ ವೇದಿಕೆಯಲ್ಲಿ ದೊರೆಯಲಿದೆ ಎಂದು ವಿವರಿಸಿದರು.

ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕ ಡಾ.ಎನ್.ಎಲ್. ರಾಜೇಶ್, ಕೆ–ಜಿಐಎಸ್ 1.0 ಅನ್ನು 2016ರಲ್ಲಿ ಜಾರಿಗೆ ತರಲಾಗಿತ್ತು. ಸುಮಾರು 600 ಜಿಐಎಸ್ ಪದರಗಳು ಹಾಗೂ 20 ಲಕ್ಷಕ್ಕೂ ಹೆಚ್ಚು ಸರ್ಕಾರಿ ಆಸ್ತಿಗಳ ಮಾಹಿತಿಯನ್ನು ಪೋರ್ಟಲ್ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ ಎಂದರು.

41 ಮೊಬೈಲ್ ಅಪ್ಲೀಕೇಶನ್ ಹಾಗೂ 60 ವೆಬ್ ಅಪ್ಲೀಕೇಶನ್ ಅಭಿವೃದ್ಧಿಪಡಿಸಲಾಗಿದ್ದು, ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕರು ಅವುಗಳನ್ನು ಬಳಸುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಳೀಯ ಸಮಸ್ಯೆಗಳಿಗೆ ಭೂದೈಶಿಕ ದತ್ತಾಂಶದ ಆಧಾರದ ಮೇಲೆ ಪರಿಹಾರ ಕಂಡುಹಿಡಿಯಲು ಕೆ–ಜಿಐಎಸ್ 2.0 ನೆರವಾಗಲಿದೆ ಎಂದು ಹೇಳಿದರು.

‘ದಿಶಾಂಕ್’ ಆ್ಯಪ್ ಮೂಲಕ ಆಸ್ತಿಯ ಮಾಲೀಕತ್ವದ ಮಾಹಿತಿ ತಿಳಿದುಕೊಳ್ಳಬಹುದಾಗಿದ್ದು, ಕೃಷಿ ಹವಾಮಾನ ವರದಿಯನ್ನು ಎರಡು–ಮೂರು ದಿನಗಳ ಮುಂಚಿತವಾಗಿ ಪಡೆಯುವ ವ್ಯವಸ್ಥೆಯೂ ಇದೆ. ಸಾರ್ವಜನಿಕರು ಕೆ–ಜಿಐಎಸ್ ವೆಬ್ಸೈಟ್ ಬಳಸಿ ಅಗತ್ಯ ಮಾಹಿತಿ ಪಡೆಯಬಹುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ದೊಡ್ಡಬಳ್ಳಾಪುರ ವಿಭಾಗದ ಡಿವೈಎಸ್ಪಿ ಪಾಂಡುರಂಗ, ವೈಜ್ಞಾನಿಕ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-15-223494722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.