ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ತಡರಾತ್ರಿ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಸುಮಾರು ₹7 ಕೋಟಿಗೂ ಅಧಿಕ ಮೌಲ್ಯದ ಹೈಡ್ರೊ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಲಾಗಿದೆ.

ಬ್ಯಾಂಕಾಕ್ನಿಂದ ಬಂದಿದ್ದ ಪ್ರಯಾಣಿಕರ ಬ್ಯಾಗ್ ತಪಾಸಣೆ ವೇಳೆ ಈ ಮಾದಕ ವಸ್ತು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲ ಪ್ರಕರಣದಲ್ಲಿ 11.88 ಕೆ.ಜಿ ತೂಕದ ಹೈಡ್ರೊ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹4.16 ಕೋಟಿ ಎಂದು ಅಂದಾಜಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ₹2.96 ಕೋಟಿ ಮೌಲ್ಯದ 8.47 ಕೆ.ಜಿ ಹೈಡ್ರೊ ಗಾಂಜಾವನ್ನು ಜಪ್ತಿ ಮಾಡಲಾಗಿದೆ.

ಈ ಎರಡೂ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್ ಕಾಯ್ದೆ–1985) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬ್ಯಾಂಕಾಕ್ನಿಂದ ಬಂದ ಪ್ರಯಾಣಿಕರು ಬ್ಯಾಗ್ಗಳಲ್ಲಿ ಯಾರಿಗೂ ಗೋಚರವಾಗದಂತೆ ಮಾದಕ ವಸ್ತುಗಳನ್ನು ಅಡಗಿಸಿ ಸಾಗಿಸಲು ಯತ್ನಿಸಿದ್ದರು. ವಿಮಾನ ನಿಲ್ದಾಣದಲ್ಲಿ ಅವರ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಮಾದಕ ವಸ್ತುಗಳ ಕಳ್ಳಸಾಗಣೆ ಯತ್ನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಸ್ಟಮ್ಸ್ ಇಲಾಖೆ ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದೆ. ವಿಶೇಷವಾಗಿ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರ ಸಾಮಾನುಗಳ ಪರಿಶೀಲನೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣಗಳ ಹಿಂದೆ ಕಾರ್ಯನಿರ್ವಹಿಸುತ್ತಿರುವ ಜಾಲದ ಕಿಂಗ್ಪಿನ್ಗಳ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಮತ್ತಷ್ಟು ರೋಪಿಗಳ ಬಂಧನ ಆಗುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-16-390885049

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.