ಪ್ರಜಾವಾಣಿ ವಾರ್ತೆ

ದೇವನಹಳ್ಳಿ: ಬರಗಾಲ ಆವರಿಸಿರುವುದರಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಜಿಲ್ಲಾಡಳಿತದ ಭವನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಪ್ರಸ್ತುತ ವರ್ಷ ಜಿಲ್ಲೆಯಲ್ಲಿ ಬರಗಾಲ ಎದುರಾಗಿದ್ದು ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಇದುವರೆಗೆ ಸಮಸ್ಯೆ ಕಂಡುಬಂದಿಲ್ಲ. ಆದರೂ ಮುಂಜಾಗ್ರತಾವಾಗಿ ಜನರಿಗೆ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮ ವಹಿಸಿ, ಜಲ ಜೀವನ್ ಮಿಷನ್ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸಿ, ಮೋಟಾರ್ ಪಂಪ್ ಅಳವಡಿಸಿ ನೀರು ಪೂರೈಸಿ ಎಂದು ನಿರ್ದೇಶಿಸಿದರು.

ಖಾಸಗಿ ಕೊಳವೆಬಾವಿ ಹಾಗೂ ನೀರಿನ ಟ್ಯಾಂಕರ್ಗಳನ್ನು ಅತಿ ಅವಶ್ಯಕತೆ ಇದ್ದಾಗ ಮಾತ್ರ ಬಳಸಿಕೊಳ್ಳಿ. ಜಿಲ್ಲೆಯ ಯಾವುದೇ ಗ್ರಾಮ, ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ, ಜಾನುವಾರುಗಳಿಗೆ ಮೇವು ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಇರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಪರಿಶೀಲಿಸಬೇಕು. ಅಗತ್ಯ ಇರುವ ಸ್ಥಳದಲ್ಲಿ ಹೊಸದಾಗಿ ಕುಡಿಯುವ ನೀರಿನ ಘಟಕ ನಿರ್ಮಿಸಿ ಎಂದು ಸಲಹೆ ನೀಡಿದರು.

ಕೃಷಿ, ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಿ, ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ತಲುಪಿಸಬೇಕು. ಬೆಳೆ ವಿಮೆ ಯೋಜನೆ ಅಡಿ ನೋಂದಾಯಿತ ರೈತರಿಗೆ ಪ್ರೋತ್ಸಾಹ ನೀಡಿ. ರೇಷ್ಮೆ ಬೆಳೆಯನ್ನು ವಿಮಾ ಯೋಜನೆಗೆ ಸೇರಿಸಲು ಕ್ರಮ ವಹಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಆಂಬುಲೆನ್ಸ್ ಸೇವೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಜನರ ಆರೋಗ್ಯ ಹಿತದೃಷ್ಟಿಯಿಂದ ಸಮರ್ಪಕ ಔಷಧಿಗಳು ಎಲ್ಲಾ ಪ್ರಾಥಮಿಕ, ಸಮುದಾಯ, ತಾಲ್ಲೂಕು ಆಸ್ಪತ್ರೆಗೆಳಲ್ಲಿ ಶೇಖರಿಸಿಡಲು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರಲು ಅಗತ್ಯ ಕ್ರಮ ವಹಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

ಶಾಸಕರಾದ ಶರತ್ ಬಚ್ಚೇಗೌಡ, ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯರಾದ ರವಿ, ಜಿಲ್ಲಾಧಿಕಾರಿ ಎನ್.ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್.ಅನುರಾಧ, ಸಚಿವರ ಆಪ್ತ ಕಾರ್ಯದರ್ಶಿ ಎಚ್.ನಟರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್ ಉಪಸ್ಥಿತರಿದ್ದರು.

ಜೆಜೆಎಂ ಕೊಳವೆ ಬಾವಿಗೆ ವಿದ್ಯುತ್ ನೀಡಿ ಅಗತ್ಯ ಇರುವೆಡೆ ನೀರಿನ ಘಟಕ ನಿರ್ಮಾಣ ಜಾನುವಾರುಗಳಿಗೆ ಮೇವು ಕೊರತೆ ಆಗದಂತೆ ಕ್ರಮ

ಆರು ತಿಂಗಳಲ್ಲಿ ಪೋಡಿ ಮುಕ್ತ ಜಿಲ್ಲೆ

ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ರೈತರು ಜಮೀನು ಸರ್ವೆ ಕಾರ್ಯ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಿ. ಜಿಲ್ಲೆಯನ್ನು ಆರು ತಿಂಗಳಲ್ಲಿ ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಸಚಿವ ಕೆ.ಎಚ್.ಮುನಿಯಪ್ಪ ಸೂಚಿಸಿದರು. ಇದಕ್ಕಾಗಿ ಕಂದಾಯ ಸಚಿವರ ಜೊತೆ ಸಭೆ ನಡೆಸಿ ಅಗತ್ಯ ಸಹಕಾರ ಕೋರಲಾಗುವುದು. ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳ ಜಾಗಕ್ಕೆ ಸೂಕ್ತ ಬಂದೋಬಸ್ತ್ ಮಾಡಬೇಕಿದ್ದು ಒಂದು ತಿಂಗಳ ಒಳಗಾಗಿ ಸರ್ವೆ ಕಾರ್ಯ ನಡೆಸಿ ಒತ್ತುವರಿ ಆಗಿದಲ್ಲಿ ತೆರವುಗೊಳಿಸಿ ಕಲ್ಲು ಹಾಕಿಸಿ ಎಂದರು. ಎಲ್ಲೆಂದರಲ್ಲಿ ಕಸ ಸುರಿದರೆ ದಂಡ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ಘನತ್ಯಾಜ್ಯ ವಿಲೇವಾರಿ ಘಟಕಗಳಲ್ಲಿ ಸರಿಯಾದ ರೀತಿಯಲ್ಲಿ ಕಸ ವಿಲೇವಾರಿ ಆಗಬೇಕು. ಸಾರ್ವಜನಿಕ ಸ್ಥಳಗಳಲ್ಲಿ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುವವರ ವಿರುದ್ಧ ಕ್ರಮ ಕೈಗೊಳ್ಳಿ. ಅವಶ್ಯವಿದ್ದಲ್ಲಿ ಸಿ.ಸಿ ಕ್ಯಾಮರಾ ಅಳವಡಿಸಿ ಎಂದು ಸಚಿವ ಕೆ.ಎಚ್.ಮುನಿಯಪ್ಪ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.