ದೇವನಹಳ್ಳಿ: ಗ್ರಾಮೀಣ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಪಾರದರ್ಶಕ ಆಡಳಿತದ ಮೂಲಕ ಅಗತ್ಯ ಸೌಕರ್ಯ ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ವಾಸಂತಿ ಅಮರ್ ಹೇಳಿದರು.

ಜಿಲ್ಲಾ ಪಂಚಾಯಿತಿಯಿಂದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮೀಣಾಭಿವೃದ್ಧಿಗೆ ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕು. ಸಾಮಾಜಿಕ ಬದಲಾವಣೆಗೆ ತೊಡಗಿಸಿಕೊಂಡು ಜಿಲ್ಲೆಯ ಹೆಸರನ್ನು ರಾಜ್ಯ ಮಟ್ಟದಲ್ಲಿ ಮೆರೆದಿಡಲು ಶ್ರಮಿಸಬೇಕೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, 73ನೇ ಸಂವಿಧಾನ ತಿದ್ದುಪಡಿ ಕಾಯ್ದೆ ಜಾರಿಗೆ ಬಂದ ದಿನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಪ್ರಜಾಪ್ರಭುತ್ವ ವಿಕೇಂದ್ರೀಕರಣ ಹಾಗೂ ಸ್ಥಳೀಯ ಆಡಳಿತ ಬಲಪಡಿಸುವ ಸಂಕಲ್ಪವನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಇದಾಗಿದೆ ಎಂದರು.

ಮುಖ್ಯ ಯೋಜನಾ ಅಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-15-788116107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.