ದೇವನಹಳ್ಳಿ: ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಮಲ್ಲೇಪುರ ಗ್ರಾಮದ ಗೋಮಾಳ ಜಮೀನಿನಲ್ಲಿ ನಡೆಯುತ್ತಿರುವ ಪೋಡಿ ಪ್ರಕ್ರಿಯೆಯನ್ನು ನಿಲ್ಲಿಸಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಮಲ್ಲೇಪುರ ಭೂ ಹೋರಾಟ ಸಮಿತಿ ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗೋಮಾಳ ಜಮೀನಿನಲ್ಲಿ ಅಕ್ರಮವಾಗಿ ಪೋಡಿ ನಡೆಸಲು ಕೆಲವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕಾರಿಗಳನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಈ ಜಮೀನಿನಲ್ಲಿ ಕೆಲವರು ಕಾನೂನು ಬದ್ಧವಾಗಿ ಸಾಗುವಳಿ ಪಡೆದು ಖಾತೆ ಮಾಡಿಕೊಂಡು ವಾಸಿಸುತ್ತಿದ್ದು, ಅವರ ಹಕ್ಕುಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಪೋಡಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಕುರಿತು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಮಹಜರ್ ಮಾಡಿ, ಗ್ರಾಮಸ್ಥರ ಅಭಿಪ್ರಾಯಗಳನ್ನು ಸಂಗ್ರಹಿಸಬೇಕು ಎಂದು ಒತ್ತಾಯಿಸಿದರು.

ಅಕ್ರಮ ಪೋಡಿ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ, ಸರ್ಕಾರಿ ಗೋಮಾಳ ಜಮೀನನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.