ದೇವನಹಳ್ಳಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕೆಗಳು ಖಾಲಿ ಹುದ್ದೆ ಭರ್ತಿ ಮಾಡುವಾಗ ಸ್ಥಳೀಯ ಯುವಕರಿಗೆ ಪ್ರಾಮುಖ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಕಂಪನಿಗಳ ಪ್ರತಿನಿಧಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಕೈಗಾರಿಕೆ ಕೇಂದ್ರದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಬಳಿಕ ಕೈಗಾರಿಕಾ ಚಟುವಟಿಕೆಗಳು ವೇಗವಾಗಿ ವಿಸ್ತರಿಸುತ್ತಿವೆ. ಈಗಾಗಲೇ ಸುಮಾರು 10 ಸಾವಿರ ಎಕರೆ ವ್ಯಾಪ್ತಿಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾಗಿದೆ. ಅನೇಕ ಕುಟುಂಬಗಳು ಕೈಗಾರಿಕೆಗಳಿಗಾಗಿ ತಮ್ಮ ಭೂಮಿಯನ್ನು ನೀಡಿದ್ದು, ಆ ಕುಟುಂಬಗಳ ಕನಿಷ್ಠ ಒಬ್ಬರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನ್ಯಾಯಸಮ್ಮತವಾದ ನಿರೀಕ್ಷೆ ಎಂದು ಹೇಳಿದರು.

ಸರ್ಕಾರ ಕೈಗಾರಿಕೆಗಳಿಗೆ ಅಗತ್ಯ ಮೂಲಸೌಕರ್ಯ, ವಿದ್ಯುತ್, ರಸ್ತೆ ಹಾಗೂ ಇತರ ಸೌಲಭ್ಯಗಳನ್ನು ಒದಗಿಸುತ್ತಿದೆ. ಅದೇ ರೀತಿಯಲ್ಲಿ ಕಂಪನಿಗಳು ಸರ್ಕಾರದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲೆಯಲ್ಲಿ ಅರ್ಹ ಹಾಗೂ ಕೌಶಲ್ಯ ಹೊಂದಿದ ಯುವಕರು ಸಾಕಷ್ಟಿದ್ದಾರೆ. ಅವರಿಗೆ ಆದ್ಯತೆ ನೀಡುವುದು ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಬೇಕು ಎಂದರು.

ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ ಸಂಸ್ಥೆಗಳು ಸ್ವಂತ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಆರಂಭಿಸಿ ಅಗತ್ಯ ತರಬೇತಿ ನೀಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಜೊತೆಗೆ, ಸರ್ಕಾರದ ತರಬೇತಿ ಸಂಸ್ಥೆಗಳ ಮೂಲಕ ಕೈಗಾರಿಕೆಗಳ ಅವಶ್ಯಕತೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ರಾಜಣ್ಣ, ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ.ಎನ್. ಅನುರಾಧ, ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನರೇಂದ್ರ ಬಾಬು, ತಾಲ್ಲೂಕು ಕೈಗಾರಿಕಾ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಕಂಪನಿಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಉದ್ಯೋಗ ವಿವರ ವರದಿಗ ಸೂಚನೆ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಅಸಮಾಧಾನ ಮೂಡದಂತೆ ಕಂಪನಿಗಳು ಸ್ಪಷ್ಟ ಮಾಹಿತಿಯನ್ನು ನೀಡಬೇಕು. ಪ್ರತಿಯೊಂದು ಸಂಸ್ಥೆಯಲ್ಲಿರುವ ಖಾಲಿ ಹುದ್ದೆಗಳು ಸ್ಥಳೀಯರಿಗೆ ಲಭಿಸಿದ ಉದ್ಯೋಗಗಳ ವಿವರಗಳನ್ನು ಸಂಗ್ರಹಿಸಿ ಸಮಗ್ರ ವರದಿ ಸಲ್ಲಿಸಲು ಸಚಿವ ಮುನಿಯಪ್ಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಿಎಸ್ಆರ್ ನಿಧಿಯಡಿ ಶಾಲಾಭಿವೃದ್ಧಿಗೆ ಕಂಪನಿಗಳು ತಮ್ಮ ವಾರ್ಷಿಕ ಲಾಭದ ಕನಿಷ್ಠ ಶೇ 2 ರಷ್ಟು ಅನ್ನು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಾಗಿ ಬಳಸುವುದು ಕಡ್ಡಾಯವಾಗಿದೆ. ಈ ಅನುದಾನವನ್ನು ವಿಶೇಷವಾಗಿ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಹಾಗೂ ಗುಣಮಟ್ಟದ ಶಿಕ್ಷಣ ಅಭಿವೃದ್ಧಿಗೆ ಮೀಸಲಿಡಬೇಕು. ಮಕ್ಕಳ ಶಿಕ್ಷಣದಲ್ಲಿ ಹೂಡಿಕೆ ಮಾಡುವುದು ಭವಿಷ್ಯದ ಸಮೃದ್ಧಿಗೆ ದಾರಿ ಮಾಡಿಕೊಡುತ್ತದೆ ಎಂದು ಎಂದು ಸಚಿವ ಮುನಿಯಪ್ಪ ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.