ಪ್ರಜಾವಾಣಿ ವಾರ್ತೆ

ದೇವನಹಳ್ಳಿ: ಪರವಾನಗಿ ಇಲ್ಲದೆ ರಸ ಗೊಬ್ಬರಗಳ ದಾಸ್ತನು, ಮಾರಾಟ ಮತ್ತು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುವವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ ನೀಡಿದ್ದಾರೆ.

ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಕೃಷಿ ಇಲಾಖೆಯಿಂದ ನಡೆದ ಮುಂಗಾರು ಹಂಗಾಮಿನ ರಸಗೊಬ್ಬರ ತಯಾರಕರ ಸಭೆಯ ಅಧ್ಯಕ್ಷತೆ ಮಾತನಾಡಿದರು.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂಆರ್ಪಿ) ದರ ವಿವರವನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರ ಬಳಕೆ ಹಾಗೂ ಸಾವಯುವ ಗೊಬ್ಬರ ಬಳಕೆ ಮಾಡುವಂತೆ ರೈತರಿಗೆ ಹೆಚ್ಚಿನ ಅರಿವು ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಂಟಿ ಕೃಷಿ ನಿರ್ದೇಶಕ ಬಿ.ಜಿ ಕಲಾವತಿ, ಮುಂಗಾರು ಹಂಗಾಮಿಗೆ ಒಟ್ಟು 31,799 ಮೆಟ್ರಿಕ್ ಟನ್ಗಳಷ್ಟು ವಿವಿಧ ರಸಗೊಬ್ಬರಗಳ ಬೇಡಿಕೆ ಇದೆ. ಸದ್ಯಕ್ಕೆ 14,213 ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ದಾಸ್ತನು ಲಭ್ಯವಿದೆ. ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ರಸಗೊಬ್ಬರವು ಸರಬರಾಜು ಆಗುತ್ತದೆ ಎಂದು ತಿಳಿಸಿದರು.

ಉಪ ಕೃಷಿ ನಿರ್ದೇಶಕಿ ಗಾಯಿತ್ರಿ, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಸಗಟು ಹಾಗೂ ಚಿಲ್ಲರೆ ಮಾರಾಟಗಾರರು, ರಸಗೊಬ್ಬರ ಸರಬರಾಜು ಮಾಡುವ ಸರಬರಾಜುದಾರರ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.