ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ವಿಮಾ ಯೋಜನೆ: ಡೆಲಿವರಿ ನೌಕರರಿಂದ ಅರ್ಜಿ ಆಹ್ವಾನ

Published 2 ಜನವರಿ 2024, 16:17 IST
Last Updated 2 ಜನವರಿ 2024, 16:17 IST
ಅಕ್ಷರ ಗಾತ್ರ

ದೇವನಹಳ್ಳಿ: ಕಾರ್ಮಿಕ ಇಲಾಖೆಯ ವತಿಯಿಂದ ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ಆಹಾರ ಮತ್ತು ಇತರೆ ಸಾಮಾನು ಸರಂಜಾಮು ಪೂರೈಸುವ ಪೂರ್ಣಕಾಲಿಕ/ಅರೆಕಾಲಿಕ ಡೆಲಿವರಿ ನೌಕರರಿಂದ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಪಘಾತದಿಂದ ಮರಣ ಹೊಂದಿದಲ್ಲಿ ವಿಮಾ ಪರಿಹಾರ ₹2 ಲಕ್ಷ, ಜೀವ ವಿಮಾ ₹ 2 ಲಕ್ಷ ಸೇರಿ ಒಟ್ಟು ₹4 ಲಕ್ಷ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹2 ಲಕ್ಷ ವರೆಗೆ, ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ₹1 ಲಕ್ಷದವರೆಗೆ ಸೌಲಭ್ಯವಿರುತ್ತದೆ.

ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ಡೆಲಿವರಿ ನೌಕರರು ಎಂದು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನೆ ಪಡೆಯಬಹುದಾಗಿದೆ.

ಅರ್ಹ ಫಲಾನುಭವಿಗಳು ಯೋಜನೆಯಡಿ ನಿಗದಿ ಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಹಾಗೂ ಆಯಾಯ ಜಿಲ್ಲಾ, ತಾಲ್ಲಾಕು ಕಾರ್ಮಿಕ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT