ದೇವನಹಳ್ಳಿ: ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಕ ಕಾರ್ಮಿಕರು ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಪಡೆಯಲು ಕಾರ್ಮಿಕ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಪಘಾತದಿಂದ ಮರಣಹೊಂದಿದಲ್ಲಿ ₹2 ಲಕ್ಷ, ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ₹2 ಲಕ್ಷ ಹಾಗೂ ಅಪಘಾತ, ಮಾರಣಾಂತಿಕ ಕಾಯಿಲೆ, ಗಂಭೀರ ಅನಾರೋಗ್ಯಕ್ಕೆ ತುತ್ತಾದರೆ ಆಸ್ಪತ್ರೆ ವೆಚ್ಚ ಮರುಪಾವತಿ ₹ 1ಲಕ್ಷದವರೆಗೆ ಸೌಲಭ್ಯ ಇರುತ್ತದೆ. ಎಲ್ಲಾ ಪತ್ರಿಕಾ ವಿತರಕರು ಇ-ಶ್ರಮ್ ಪೋರ್ಟಲ್ www.eshram.gov.in ರಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ‘ನ್ಯೂಸ್ ಪೇಪರ್ ಬಾಯ್’ ಎಂದು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನೆ ಪಡೆಯಬಹುದು ಎಂದು ಇಲಾಖೆ ಕೋರಿದೆ.

ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳು, ಯೋಜನೆಯಡಿ ನಿಗದಿ ಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಹಾಗೂ ಆಯಯಾ ತಾಲ್ಲೂಕು ಕಾರ್ಮಿಕ ಇಲಾಖೆ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.