ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯೂಟಿ ಪಾರ್ಲರ್‌ ನಿರ್ವಹಣೆಗೆ ತರಬೇತಿ

Published 2 ಫೆಬ್ರುವರಿ 2024, 15:24 IST
Last Updated 2 ಫೆಬ್ರುವರಿ 2024, 15:24 IST
ಅಕ್ಷರ ಗಾತ್ರ

ದೇವನಹಳ್ಳಿ: ರುಡ್‌ಸೆಟ್‌ ಸಂಸ್ಥೆ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್‌ ನಿರ್ವಹಣೆ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಮಾರ್ಚ್ 1 ರ ಒಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು ಮೊ. 9740982585, 9380162042, 9113880324 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ‌.

***

ಕೃಷಿ ಉದ್ಯಮ ಉತ್ತೇಜನಕ್ಕೆ ‘ನವೋದ್ಯಮ’

ದೇವನಹಳ್ಳಿ: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸಲು ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ’ ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆ ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯಕರಣ ಉತ್ತೇಜಿಸಲು ಯೋಜಿಸಲಾಗಿದೆ.  ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇ 50 ರಷ್ಟು ಸಹಾಯಧನವನ್ನು ಬ್ಯಾಂಕ್ ಸಾಲದ ಮೂಲಕ ನೀಡಲಾಗುವುದು.

ಆಸಕ್ತ ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಪ್ರಗತಿಪರ ರೈತರು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲ, ಉಪ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ, ಸಂಪರ್ಕಿಸಿ ಅರ್ಜಿಗಳನ್ನು ಪಡೆಯುವಂತೆ ಪ್ರಕಟಣೆ ತಿಳಿಸಿದೆ.

***

ಮುಕ್ತ ವಿವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದೇವನಹಳ್ಳಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ 2023-24ರ ಜನವರಿ ಆವೃತ್ತಿ ಪ್ರವೇಶಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್‌ www.ksoumysuru.ac.in ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ವಿವರ ನೀಡಿದ್ದು, ಆಸಕ್ತ ವಿದ್ಯಾರ್ಥಿಗಳು ಅದರನ್ವಯ ಆನ್‌ಲೈನ್‌ ಪ್ರವೇಶಾತಿ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪಡೆಯಬಹುದು ಎಂದು ಮುಕ್ತ ವಿವಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT