ದೇವನಹಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ತಾಲ್ಲೂಕಿನ ಬೀರಸಂದ್ರ ಬಳಿಯ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಸಂಘದ ರಾಜ್ಯಾಧ್ಯಕ್ಷ ದಿಲೀಪ್ ಕುಮಾರ್ ಬಿ.ಎಂ ಮಾತನಾಡಿ, ಗ್ರಾಮಗಳ ಸಮಗ್ರ ಅಭಿವೃದ್ಧಿಯಲ್ಲಿ ಪಿಡಿಒಗಳ ಪಾತ್ರ ಮಹತ್ತರವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಅವರ ಮೇಲೆ ಹೆಚ್ಚುತ್ತಿರುವ ಅಮಾನವೀಯ ಕೆಲಸದ ಒತ್ತಡದಿಂದ ಮಾನಸಿಕವಾಗಿ ತೀವ್ರ ಹಿನ್ನಡೆ ಉಂಟಾಗುತ್ತಿದೆ ಎಂದು ಹೇಳಿದರು.

ಗದಗ ಜಿಲ್ಲೆಯ ರೋಣ ತಾಲ್ಲೂಕಿನಲ್ಲಿ ಕೊತಬಾಳ ಗ್ರಾಮ ಪಂಚಾಯಿತಿ ಪಿಡಿಒ ಮುಕ್ತಂಹುಸೇನ ಕರಡಿಗುಡ್ಡ (46) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿಡಿಒ ಸಮುದಾಯವನ್ನು ಬೆಚ್ಚಿಬೀಳಿಸಿದೆ. ಅಧಿಕ ಕೆಲಸದ ಒತ್ತಡ, ಹಿಂದಿನ ಪ್ರಕರಣದ ಲೋಕಾಯುಕ್ತ ತನಿಖೆ, ಮಾನಸಿಕ ಕಿರುಕುಳ ಹಾಗೂ ವೇತನ ಬಾಕಿ ಇರುವುದು ಈ ದುರ್ಘಟನೆಗೆ ಕಾರಣವಾಗಿವೆ ಎಂದು ಆರೋಪಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು. ಪಿಡಿಒಗಳಿಗೆ ಸೂಕ್ತ ಸೇವಾ ಭದ್ರತೆ ಒದಗಿಸಿ, ಒತ್ತಡರಹಿತ ಕೆಲಸದ ವಾತಾವರಣ ನಿರ್ಮಿಸಬೇಕು ಎಂದು ಒತ್ತಾಯಿಸಿದರು.

ಮುಕ್ತಂಹುಸೇನ ಕರಡಿಗುಡ್ಡ ಅವರ ಆತ್ಮಹತ್ಯೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಹಾಗೂ ಬಾಕಿ ವೇತನವನ್ನು ಶೀಘ್ರ ಬಿಡುಗಡೆ ಮಾಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಆಯುಕ್ತಾಲಯ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕಚೇರಿ ಸಿಬ್ಬಂದಿಗೆ ಕಡ್ಡಾಯ ವರ್ಗಾವಣೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಹೆಚ್ಚುವರಿ ಪ್ರಭಾರ ಕೆಲಸದ ಹೊರೆ ನಿವಾರಿಸಬೇಕು. ಕ್ಷುಲ್ಲಕ ಕಾರಣಗಳಿಗೆ ಅಮಾನತು ಶಿಕ್ಷೆ ವಿಧಿಸುವುದು ನಿಲ್ಲಬೇಕು. ಅಮಾನತು ಪ್ರಕರಣಗಳನ್ನು ಕಾಲಮಿತಿಯೊಳಗೆ ತನಿಖೆ ನಡೆಸಿ ತೀರ್ಮಾನಿಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆ ನಂತರ ಸಂಘದ ಸದಸ್ಯರು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಪರಿಷತ್ ಸದಸ್ಯ ಕೆಂಪರಾಜು, ಪ್ರಧಾನ ಕಾರ್ಯದರ್ಶಿ ಶಿವರಾಜು, ಉಪಾಧ್ಯಕ್ಷ ತಿರುಪತಿ, ಮಹಿಳಾ ಉಪಾಧ್ಯಕ್ಷೆ ರೇಖಾ, ಖಜಾಂಚಿ ಮೆಹಬೂಬ್ ಪಾಷಾ, ಸಂಯುಕ್ತ ಕಾರ್ಯದರ್ಶಿ ಧರಣೇಶ್, ಸೌಮ್ಯ ವಿ., ಸಾಂಸ್ಕೃತಿಕ ಕಾರ್ಯದರ್ಶಿ ನಂದಿನಿ, ಕ್ರೀಡಾ ಕಾರ್ಯದರ್ಶಿ ಲೋಕೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.