ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಗ್ರಾಮಾಂತರ | ಜಿಲ್ಲೆಯಲ್ಲಿ ಶೇ 99 ಚಿಣ್ಣರಿಗೆ ಪೋಲಿಯೊ

476 ಬೂತ್‌ಗಳಿಂದ 1,00,50 ಮಕ್ಕಳಿಗೆ ಲಸಿಕೆ
Published 3 ಮಾರ್ಚ್ 2024, 16:02 IST
Last Updated 3 ಮಾರ್ಚ್ 2024, 16:02 IST
ಅಕ್ಷರ ಗಾತ್ರ

ದೇವನಹಳ್ಳಿ: ಜಿಲ್ಲೆಯ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದಲ್ಲಿ ಶೇ 99 ರಷ್ಟು ಚಿಣ್ಣರಿಗೆ ಯಶಸ್ವಿಯಾಗಿ ಪೋಲಿಯೊ ಲಸಿಕೆ ಹಾಕಲಾಯಿತು.

ಜಿಲ್ಲೆಯಲ್ಲಿ ಒಟ್ಟು 476 ಬೂತ್ ಜೊತೆಗೆ 135 ಸಂಚಾರಿ ತಂಡಗಳ ವ್ಯವಸ್ಥೆ ಮಾಡಲಾಗಿತ್ತು. 1,00,105 ಚಿಣ್ಣರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. 1,00,050 ಚಿಣ್ಣರಿಗೆ ಲಸಿಕೆ ಹಾಕಲಾಗಿದೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 20,766 ಮಕ್ಕಳ ಪೈಕಿ 20,051 ಚಿಣ್ಣರಿಗೆ ಪೋಲಿಯೊ ಲಸಿಕೆ ನೀಡಲಾಗಿದ್ದು, ಒಟ್ಟು ಶೇ. 97 ರಷ್ಟು ಗುರಿ ಸಾಧನೆಯಾಗಿದೆ.

ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಜಿಪಂ ಯೋಜನಾಧಿಕಾರಿ ವಿಠಳ್‌ ಕಾವಳೆ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಪಲ್ಸ್ ಪೋಲಿಯೊ ಲಸಿಕಾ ಅಭಿಯಾನದಲ್ಲಿ ಪ್ರತಿಯೊಬ್ಬರು ತಪ್ಪದೇ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯೂ ಪ್ರತಿ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೊ ಹಾಕಿಸಬೇಕು. ಯಾವುದೇ ಒಂದು ಮನೆಯು ಸಹ ತಪ್ಪದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಅಧಿಕಾರಿ ಡಾ. ಸುನಿಲ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಗ್ರಾಮೀಣ, ನಗರ ಪ್ರದೇಶ ಒಟ್ಟು 2.79 ಲಕ್ಷ ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಲು ಗುರಿ ಹೊಂದಲಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಸೀಮಾ ರುದ್ರಪ್ಪ, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಮುರಳಿ ಮೋಹನ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ‌. ಮಂಜುನಾಥ್, ತಾಲೂಕು ಆರೋಗ್ಯಾಧಿಕಾರಿ ಅಧಿಕಾರಿ ಡಾ‌‌. ಸಂಜಯ್, ಜಿಲ್ಲಾ ಮಲೇರಿಯ ನಿಯಂತ್ರಣ ಅಧಿಕಾರಿ ಡಾ. ಕೃಷ್ಣಾರೆಡ್ಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು, ಬಿ ಜಯಲಕ್ಷ್ಮಿ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶ್, ಆರೋಗ್ಯ ಸಂರಕ್ಷಣಾಧಿಕಾರಿ ರೇಖಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT