ದೇವನಹಳ್ಳಿ: ಜಿಲ್ಲೆಯಲ್ಲಿ ಜೂನ್ 28ರಿಂದ ಜುಲೈ 1ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಯಲಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಲಸಿಕೆ ತಲುಪುವಂತೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್.ಅನುರಾಧ ಸೂಚಿಸಿದರು.

ತಾಲ್ಲೂಕಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೋಷಕರು ತಮ್ಮ 0–5 ವರ್ಷದೊಳಗಿನ ಮಕ್ಕಳನ್ನು ಸಮೀಪದ ಪೋಲಿಯೊ ಬೂತ್ಗಳಿಗೆ ಕರೆದುಕೊಂಡು ಬಂದು ಉಚಿತ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ ಹಾಗೂ ಆರೋಗ್ಯ ಅಧಿಕಾರಿಗಳು ಮನೆಮನೆಗೆ ತೆರಳಿ ಲಸಿಕೆ ಕುರಿತು ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಧ್ವನಿವರ್ಧಕ ಮೂಲಕ ವ್ಯಾಪಕ ಜಾಗೃತಿ ಮೂಡಿಸುವಂತೆ ಸೂಚಿಸಿದರು. ಅಭಿಯಾನದಲ್ಲಿ ಎನ್ಸಿಸಿ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳ ಸಹಕಾರ ಪಡೆಯಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್ಗಳು, ಆಯ್ದ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಬಸ್ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ ಮತ್ತು ಟೋಲ್ಗೇಟ್ಗಳಲ್ಲಿ ಪೋಲಿಯೊ ಬೂತ್ಗಳನ್ನು ತೆರೆಯಲಾಗುವುದು ಎಂದು ಹೇಳಿದರು.

ಗರ್ಭಿಣಿಯರಿಗೆ ಸೂಕ್ತ ಆರೈಕೆ ನೀಡಲು ಸೂಚನೆ: ಜಿಲ್ಲೆಯ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಗರ್ಭಾವಸ್ಥೆಯಿಂದ ಹೆರಿಗೆವರೆಗೆ ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಹಾಗೂ ಅಗತ್ಯ ಲಸಿಕೆ ಒದಗಿಸಬೇಕು. ಹೆರಿಗೆ ನಂತರ ತಾಯಿ ಮತ್ತು ಮಗುವಿಗೆ ಸಮರ್ಪಕ ಆರೈಕೆ ಸಿಗುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ತಾಯಿ-ಶಿಶು ಮರಣ ತಡೆಗೆ ಒತ್ತು: ಹೆರಿಗೆ ಸಮಯದಲ್ಲಿ ಯಾವುದೇ ಬಾಣಂತಿ ಅಥವಾ ಶಿಶು ಮರಣ ಸಂಭವಿಸದಂತೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಬೇಕು. ಹೆರಿಗೆಗೆ ಬಂದ ಗರ್ಭಿಣಿಯರನ್ನು ಅನಗತ್ಯವಾಗಿ ಬೇರೆ ಆಸ್ಪತ್ರೆಗೆ ಕಳುಹಿಸಿದರೆ ಸಂಬಂಧಪಟ್ಟ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹೆಣ್ಮಕ್ಕಳಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಎಚ್ಪಿವಿ ಲಸಿಕೆ ಮಹತ್ವದ್ದಾಗಿದೆ. ಶಾಲೆ ಮತ್ತು ಕಾಲೇಜುಗಳಲ್ಲಿ ಇದರ ಕುರಿತು ಹೆಚ್ಚಿನ ಅರಿವು ಮೂಡಿಸಿ ಲಸಿಕೆ ಪಡೆಯುವಂತೆ ಪ್ರೋತ್ಸಾಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆ ಹಾಗೂ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಕಟ್ಟುನಿಟ್ಟಾಗಿ ತಡೆಯಬೇಕು. ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಕಂಡುಬಂದರೆ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ ಅವರು, ಎಲ್ಲ ತಾಲ್ಲೂಕು ಆರೋಗ್ಯಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಂಬಾಕು ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಾಬಳೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಹೇಮಾವತಿ, ತಾಲ್ಲೂಕು ಆರೋಗ್ಯಾಧಿಕಾರಿ, ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-15-568753409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.