ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಗಾಲದ ನಡುವೆ 453 ಕಾಮಗಾರಿ ಪೂರ್ಣ: ಕೆ. ಎಚ್‌. ಮುನಿಯಪ್ಪ

ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಚ್‌. ಮುನಿಯಪ್ಪ
Published 26 ಜನವರಿ 2024, 15:45 IST
Last Updated 26 ಜನವರಿ 2024, 15:45 IST
ಅಕ್ಷರ ಗಾತ್ರ

ದೇವನಹಳ್ಳಿ: ಬರಗಾಲ ಘೋಷಿತ ಜಿಲ್ಲೆಯಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬರ ನಿವಾರಣೆಗೆ ಕೈಗೊಂಡ 453 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಚ್‌. ಮುನಿಯಪ್ಪ ತಿಳಿಸಿದರು.

ಜಿಲ್ಲಾಡಳಿತದಿಂದ ದೇವನಹಳ್ಳಿ ಟೌನ್‌ನ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 75ನೇ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಗೋಕಟ್ಟೆ, ಕುಂಟೆ, ಕೆರೆ, ಕಲ್ಯಾಣ , ಕೃಷಿ ಹೊಂಡ, ಬದು ನಿರ್ಮಾಣ, ನಾಲಾ ಅಭಿವೃದ್ದಿ, ಚೆಕ್ ಡ್ಯಾಂ ಮತ್ತು ಸಸಿ ನೆಡುವಂತಹ ಒಟ್ಟು 3,284 ಕಾಮಗಾರಿ ಕೈಗೆತ್ತಿಕೊಂಡಿದ್ದು, ಈವರೆಗೆ 453 ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ತಿಳಿಸಿದರು.

ರಾಗಿ ಖರೀದಿ: 2022-23ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ 29, 492 ರೈತರಿಂದ ಕ್ವಿಂಟಾಲ್ ರಾಗಿಗೆ ₹3,846 ರಾಗಿ ಖರೀದಿಸಲು ಕ್ರಮವಹಿಸಲಾಗಿದೆ. ಈವರೆಗೆ 26,660 ರೈತರು 2,59,360 ಕ್ವಿಂಟಾಲ್ ರಾಗಿ ಖರೀದಿಗೆ ನೋಂದಾಯಿಸಿಕೊಂಡಿದ್ದಾರೆ. ರಾಜ್ಯದಲ್ಲಿ 1.28ಕೋಟಿ ಪಡಿತರ ಚೀಟಿಯಲ್ಲಿನ ಅರ್ಹ ಕುಟುಂಬಗಳಿಗೆ ಪ್ರತಿ ತಿಂಗಳು ಸುಮಾರು 4 ಕೋಟಿ ಫಲಾನುಭವಿಗಳಿಗೆ ಜುಲೈನಿಂದ ಡಿಸೆಂಬರ್‌ವರೆಗೆ 3,751 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

ಜನತಾ ದರ್ಶನಕ್ಕೆ ಉತ್ತಮ ಸ್ಪಂದನೆ: ಜಿಲ್ಲೆಯಲ್ಲಿ ಜನತಾದರ್ಶನ ಕಾರ್ಯಕ್ರಮವನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ದೇವನಹಳ್ಳಿಯಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಏರ್ಪಡಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ. ದೊಡ್ಡಬಳ್ಳಾಪುರ ಹಾಗೂ ಘಾಟಿ ಸುಬ್ರಹ್ಮಣ್ಯದಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳ ಶೀಘ್ರ ಇತ್ಯರ್ಥಪಡಿಸಲು ಕ್ರಮವಹಿಸಲಾಗಿದೆ. ಜನತಾ ದರ್ಶನಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಆದ್ಯತೆ: ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶದಿಂದ ಪ್ರತಿ ದಿನ ಸರಾಸರಿ 50 ರಿಂದ 60 ಲಕ್ಷ ಪ್ರಯಾಣಕರಿಗೆ ಅನುಕೂಲವಾಗುತ್ತಿದೆ. ಈ ಯೋಜನೆಗೆ ವಾರ್ಷಿಕ ₹4,000 ಕೋಟಿ ವೆಚ್ಚ ಮಾಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಲಾಗಿದೆ. ಈ ಯೋಜನೆಯು ಮಹಿಳಾ ಸಬಲೀಕರಣದತ್ತ ದಿಟ್ಟ ಹೆಜ್ಜೆಯಾಗಿದೆ ಎಂದು ಹೇಳಿದರು.

ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ನಿಗಮದ ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ 2023- ಜೂನ್ ಮಾಹೆಯಿಂದ 2024 ಜನವರಿ 15ರವರೆಗೆ 33,33,293 ಮಹಿಳೆಯರು ಪ್ರಯಾಣಸಿದ್ದು ₹9.85 ಕೋಟಿ ವೆಚ್ಚವಾಗಿದೆ ಎಂದು ತಿಳಿಸಿದರು.

ಜಾನಪದ, ರಂಗಭೂಮಿ, ಸಮಾಜ ಸೇವೆ, ಕ್ರೀಡೆ ಸೇರಿದಂತೆ ಒಟ್ಟು 10 ಮಂದಿ ಸಾಧಕರಿಗೆ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಜಿಲ್ಲೆಯ ವಿವಿಧ ಹುದ್ದೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಕಾರಿ, ನೌಕರರಿಗೆ ನೀಡಿ ಗೌರವಿಸಲಾಯಿತು.

ಜಿಲ್ಲಾಕಾರಿ ಎನ್‌. ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಕಾರಿ ಎಚ್. ಅಮರೇಶ್, ಉಪ ಅರಣ್ಯ ಸಂರಕ್ಷಣಾಕಾರಿ ಸರಿನಾ, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಅಪರ ಪೋಲಿಸ್ ವರಿಷ್ಠಾಕಾರಿ ಪುರುಷೋತ್ತಮ, ನಾಗರಾಜ್, ಜಿಲ್ಲಾ ಮಟ್ಟದ ಅಕಾರಿಗಳು, ತಾಲ್ಲೂಕು ಮಟ್ಟದ ಅಕಾರಿಗಳು, ವಿವಿಧ ವಿಭಾಗದ ಪೋಲಿಸ್ ಸಿಬ್ಬಂದಿ, ಚುನಾಯಿತ ಜನಪ್ರತಿನಿಗಳು, ಮುಖಂಡರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರ ಮೆರವಣ ಗೆಗೆ ಚಾಲನೆ ನೀಡಲಾಯಿತು.
ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರ ಮೆರವಣ ಗೆಗೆ ಚಾಲನೆ ನೀಡಲಾಯಿತು.
ಗಣರಾಜ್ಯೋತ್ಸವ ಹಿನ್ನಲೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಯಿತು.
ಗಣರಾಜ್ಯೋತ್ಸವ ಹಿನ್ನಲೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲಾಯಿತು.
ಗಣರಾಜ್ಯೋತ್ಸವ ಹಿನ್ನಲೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ.
ಗಣರಾಜ್ಯೋತ್ಸವ ಹಿನ್ನಲೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮ.

ಸಾರ್ವಭೌಮತ್ವಕ್ಕೆ ಧಕ್ಕೆ ಬಾರದಿರಲಿ

‘ಭಾರತೀಯರರಾದ ನಾವೆಲ್ಲ ಸಮಾನತೆ ಮತ್ತು ಏಕತೆಗೆ ಒತ್ತು ನೀಡಿ ಸಹೋದರತ್ವದಿಂದ ಸಹಬಾಳ್ವೆ ನಡೆಸಬೇಕು. ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಬರದಂತೆ ನಡೆದುಕೊಳ್ಳಬೇಕು’ ಎಂದು ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು. ಸಂವಿಧಾನವು ಎಲ್ಲರಿಗೂ ಸಮಾನತೆಯ ಗ್ಯಾರೆಂಟಿ ನೀಡುತ್ತದೆ. ಸಂವಿಧಾನ ಜಾರಿಯಾಗಿ 75ನೇ ವರ್ಷಾಚರಣೆಯ ಅಂಗವಾಗಿ ಸಂವಿಧಾನ ಜಾಗೃತಿ ಜಾಥವನ್ನು ರಾಷ್ಟ್ರ ಮಟ್ಟದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ. ಸಂವಿಧಾನದ ಆಶಯ ಹಾಗೂ ಮೌಲ್ಯಗಳನ್ನು ಒಳಗೊಂಡ ಸ್ತಬ್ಧ ಚಿತ್ರವನ್ನು ಜಿಲ್ಲೆಯ ತಾಲೂಕು ಗ್ರಾ.ಪಂ ಮಟ್ಟದಲ್ಲಿ ಪ್ರದರ್ಶಿಸಿ ಸಾರ್ವಜನಿಕರಿಗೆ ಸಂವಿಧಾನದ ಕುರಿತು ಅರಿವು ಮೂಡಿಸಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT