ದೇವನಹಳ್ಳಿ: ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಾಗಮೋಹನ ದಾಸ್ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿ ಅವೈಜ್ಞಾನಿಕ. ರಾಜ್ಯ ಸರ್ಕಾರ ಅದನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿ ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಛಲವಾದಿ ಮಹಾಸಭೆ ಮಾಜಿ ಅಧ್ಯಕ್ಷ ಎಂ. ಲೋಕೇಶ್ ತಿಳಿಸಿದರು.

ಪಟ್ಟಣದಲ್ಲಿ ನಡೆದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಳಮೀಸಲಾತಿ ಜಾರಿಗೆ ತರಲು ಮಹಾಸಭೆ ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತದೆ. ಆಯೋಗದ ವರದಿ ಯಾವುದೇ ಸಮಗ್ರ ಮತ್ತು ವೈಜ್ಞಾನಿಕ ಸಮೀಕ್ಷೆಯ ಆಧಾರದ ಮೇಲೆ ಸಿದ್ಧವಾಗಿಲ್ಲ ಎಂದು ಆರೋಪಿಸಿದರು.

ಪರಿಶಿಷ್ಟ ಜಾತಿಯ ಉಪಜಾತಿಗಳ ನಿಖರ ಜನಸಂಖ್ಯೆ ಹಾಗೂ ಅವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡದೇ ಮೇಲ್ನೋಟದ ಅಂಕಿ-ಅಂಶಗಳ ಆಧಾರದ ಮೇಲೆ ವರದಿ ಸಿದ್ಧಪಡಿಸಲಾಗಿದೆ. ಇದರಿಂದ ಬಲಗೈ (ಛಲವಾದಿ) ಸಮುದಾಯ ಹಾಗೂ ಅತಿ ಹಿಂದುಳಿದ ಅಲೆಮಾರಿ ಉಪಜಾತಿಗಳಿಗೆ ಅನ್ಯಾಯವಾಗಲಿದೆ ಎಂದರು.

ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಉಂಟುಮಾಡುವ ದೋಷಪೂರಿತ ವರದಿಯನ್ನು ಸರ್ಕಾರ ಒಪ್ಪಿಕೊಳ್ಳಬಾರದು. ಸರ್ಕಾರ ಎಡಗೈ ಸಮುದಾಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವುದು ನ್ಯಾಯಸಮ್ಮತವಲ್ಲ. ಸಮುದಾಯದ ಜನಸಂಖ್ಯೆಯನ್ನು ಪರಿಗಣಿಸದೆ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕು ಛಲವಾದಿ ಮಹಾಸಭೆಯ ಅಧ್ಯಕ್ಷ ಎ. ನಾಗರಾಜು ಮಾತನಾಡಿ, ಮಾರ್ಚ್ 25ರಂದು ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ತಾಲ್ಲೂಕಿನಿಂದ 4ರಿಂದ 5 ಸಾವಿರ ಜನ ಭಾಗವಹಿಸಲಿದ್ದಾರೆ ಎಂದರು.

ದೇವನಹಳ್ಳಿ ತಾಲ್ಲೂಕು ಛಲವಾದಿ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಮಹೇಶ್ ದಾಸ್, ಖಜಾಂಚಿ ಜನತಾ ಕಾಲೋನಿ ರಾಮಣ್ಣ, ದಾಸರಹಳ್ಳಿ ಜನಕಮಣಿ, ಉಪಾಧ್ಯಕ್ಷ ಜಿ.ಸುರೇಶ್, ಚೌಡಪನಹಳ್ಳಿ ಎಂ. ಲೋಕೇಶ್, ಕುಂದಾಣ ಕೆ.ವಿ.ಸ್ವಾಮಿ, ವಿಜಯಪುರದ ನಾರಾಯಣಸ್ವಾಮಿ, ಮಾಳಿಗೆನಹಳ್ಳಿ ಪ್ರಕಾಶ್, ಸುಮಿತ್ರಮ್ಮ, ಶ್ರೀನಿವಾಸ ಗಾಂಧಿ, ಶ್ರೀನಿವಾಸ್, ವೈ.ಎಂ.ಮುನಿಕೃಷ್ಣ, ಡಿ.ಎಂ.ನಾಗರಾಜ್, ಜಗದೀಶ್, ವೆಂಕಟೇಶ್, ಮುರುಳಿ, ತ್ರಿಮೂರ್ತಿ, ಮೂರ್ತಿ ರವಿಕುಮಾರ್, ರಾಜೇಶ, ರವಿ ಪರಮೇಶ್, ನಾಗರಾಜ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-15-292414009

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.