ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ| ಕಟ್ಟುನಿಟ್ಟು ನೀತಿ ಸಂಹಿತೆ ಜಾರಿ: ಆರ್.ಲತಾ

ಚುನಾವಣೆ: ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
Last Updated 2 ಏಪ್ರಿಲ್ 2023, 5:16 IST
ಅಕ್ಷರ ಗಾತ್ರ

ದೇವನಹಳ್ಳಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಸುಗಮ ಹಾಗೂ ಸುಸೂತ್ರ ಚುನಾವಣಾ ಕಾರ್ಯ ನಿರ್ವಹಣೆಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಚುನಾವಣೆ ಮಾದರಿ ನೀತಿ ಸಂಹಿತೆ ಮತ್ತು ಇನ್ನಿತರೆ ಚುನಾವಣೆ ವಿಷಯ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ರಾಜಕೀಯ ಪಕ್ಷ ಹಾಗೂ ಸರ್ಕಾರಿ ಜಾಹೀರಾತಿಗೆ ಸಂಬಂಧಿಸಿದ ಎಲ್ಲಾ ಗೋಡೆಬರಹ, ಪೋಸ್ಟರ್ಸ್, ಬ್ಯಾನರ್ಸ್, ಫ್ಲೆಕ್ಸ್ ಇತ್ಯಾದಿಗಳು ಸಂಪೂರ್ಣವಾಗಿ ತೆರವುಗೊಂಡಿರುವುದರ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು. ಸರ್ಕಾರಿ ಪ್ರವಾಸಿ ಮಂದಿರ, ಪರಿವೀಕ್ಷಣಾ ಮಂದಿರಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದ್ದು, ವಿರೂಪಗೊಳಿಸಿದ್ದಲ್ಲಿ ನವೀಕರಣಕ್ಕೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾದ್ಯಂತ ಇರುವ ಪ್ರತಿ ಮತಗಟ್ಟೆಯಲ್ಲೂ ಮೂಲ ಸೌಕರ್ಯ ಇದೆಯೇ ಎಂದು ಅಧಿಕಾರಿಗಳು ಪರಿಶೀಲನೆ ನಡೆಸಿ ಮತ್ತೊಮ್ಮೆ ಖಚಿತ ಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸುವ ಹಿನ್ನೆಲೆಯಲ್ಲಿ ಸಭೆ, ಸಮಾರಂಭ ಗಳಿಗೆ ಕಡ್ಡಾಯ ಅನುಮತಿ ಹಾಗೂ ವೆಚ್ಚ ನಿರ್ವಹಣೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆಯಬೇಕು ಎಂದರು.

ಜಿಲ್ಲೆಯ ನಾಲ್ಕು ತಾಲೂಕು ಕಚೇರಿಯಲ್ಲಿ 24/7 ನಿರ್ವಹಣಾ ಕೇಂದ್ರ ಸ್ಥಾಪಿಸಲಾಗಿದ್ದು, ಇವಿಎಂ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ತರಬೇತಿ ಕಾರ್ಯಕ್ರಮ ಆಯೋಜಿಸಬೇಕು. ಅಂಗವಿಕಲರು ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಗುರುತಿಸಿ, 12ಡಿ ನಮೂನೆ ನೀಡಬೇಕು. 80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಆದಷ್ಟೂ ಮತಗಟ್ಟೆಗಳಿಗೇ ಬಂದು ಮತ ಚಲಾಯಿಸಲು ಅಧಿಕಾರಿಗಳು ಮನವೊಲಿಸಬೇಕು ಎಂದು ತಿಳಿಸಿದರು.

ಚುನಾವಣಾ ನಿರ್ವಹಣೆ, ಕಾನೂನು ಸುವ್ಯವಸ್ಥೆ, ಮಾದರಿ ನೀತಿ ಸಂಹಿತೆ, ಚುನಾವಣಾ ಕಾರ್ಯಗಳ ಸುಗಮ ನಿರ್ವಹಣೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಪೊಲೀಸ್, ಅಬಕಾರಿ ಇಲಾಖೆ ನೇತೃತ್ವದಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಎಸ್‌ಎಸ್‌ಟಿ ತಂಡ ನಿಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಾಕಷ್ಟು ಜಾಗರೂಕರಾಗಿ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ನಡೆಸಬೇಕು. ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜಿಸೊ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕೆಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ರವಿ ಎಂ ತಿರ್ಲಾಪುರ ಅವರು ಮಾತನಾಡಿ, ಸ್ವೀಪ್ ಚಟುವಟಿಕೆ ಮೂಲಕ ಹೆಚ್ಚು ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು
ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್ , ಜಿಲ್ಲಾ ಮಟ್ಟದ ತರಬೇತುದಾರರಾದ ಡಾ.ಅಮೀರ್ ಪಾಷಾ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ನಾಲ್ಕು ತಾಲ್ಲೂಕುಗಳ ತಹಶೀಲ್ದಾರ್‌ಗಳು, ತಾಲ್ಲೂಕು ಕಾರ್ಯ ನಿರ್ವಹಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT