ದೇವನಹಳ್ಳಿ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ಈಚೆಗ 23ನೇ ವರ್ಷದ ಉಚಿತ ಕ್ರೀಡಾ ಬೇಸಿಗೆ ಶಿಬಿರ ಆಯೋಜಿಸಲಾಗಿತ್ತು.

ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ, ದೇವನಹಳ್ಳಿ ಜೇಸಿಐ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಈ ಶಿಬಿರ ಆಯೋಜಿಸಿದ್ದವು.

ರಜಾ ಅವಧಿಯಲ್ಲಿ ಬೇಸಿಗೆ ಶಿಬಿರ ಮಕ್ಕಳ ಶೈಕ್ಷಣಿಕ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೊಡುಗುರ್ಕಿ ಕೆ.ವಿ. ಮಂಜುನಾಥ್ ಹೇಳಿದರು.

ಬೇಸಿಗೆ ಶಿಬಿರಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ನೆರವಾಗುತ್ತವೆ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಸಾದಹಳ್ಳಿ ಎಸ್. ಮಹೇಶ್ ಅಭಿಪ್ರಾಯಪಟ್ಟರು.

ಮಕ್ಕಳು ಓದಿನ ಜೊತೆಗೆ ಕ್ರೀಡೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ಸಲಹೆ ಮಾಡಿದರು.

ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಪ್ರಸನ್ನಹಳ್ಳಿ ವಿಜಯಕುಮಾರ್ ಮಾತನಾಡಿದರು. ಜೆಡಿಎಸ್ ಕಾರ್ಯಾಧ್ಯಕ್ಷ ಜಿ.ಎ. ರವೀಂದ್ರ, ತಾಲೂಕು ಸೊಸೈಟಿ ಮಾಜಿ ಅಧ್ಯಕ್ಷ ಗಂಗಾಧರ್, ದೇವನಹಳ್ಳಿ ಜೇಸಿಐ ಸಂಸ್ಥೆಯ ಅಧ್ಯಕ್ಷ ಡಿ.ಎನ್. ಸುರೇಶ್, ದೈಹಿಕ ಶಿಕ್ಷಣ ಶಿಕ್ಷಕ ಬಿ. ಪುಟ್ಟಸ್ವಾಮಿ, ಟಿ.ಆರ್. ಲೋಕೇಶ್, ಕಾರ್ಯದರ್ಶಿ ಎನ್. ಶಶಿಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-15-844145542

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.