ಸೋಮವಾರ, ಆಗಸ್ಟ್ 2, 2021
27 °C

ದೇವನಹಳ್ಳಿ ತಾ.ಪಂ: ಅಧ್ಯಕ್ಷೆಯಾಗಿ ಶಶಿಕಲಾ ಆನಂದ್ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ/ವಿಜಯಪುರ: ಚೈತ್ರಾ ವೀರೇಗೌಡ ರಾಜೀನಾಮೆಯಿಂದ ತೆರವಾಗಿದ್ದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಯಲಿಯೂರು ಕ್ಷೇತ್ರದ ಸದಸ್ಯೆ ಶಶಿಕಲಾ ಆನಂದ್ ಅವಿರೋಧ ಆಯ್ಕೆಯಾಗಿದ್ದಾರೆ.

ಶಶಿಕಲಾ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಆಯ್ಕೆಯನ್ನು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ಘೋಷಿಸಿದರು. 

ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ತಹಶೀಲ್ದಾರ್ ಅಜಿತ್ ಕುಮಾರ್ ರೈ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ವಸಂತ್ ಕುಮಾರ್, ತಹಶೀಲ್ದಾರ್ ರಾಜು ಪಾಲ್ಗೊಂಡಿದ್ದರು.

ಅಧ್ಯಕ್ಷೆಯಾಗಿ ಆಯ್ಕೆಯಾದ ಶಶಿಕಲಾ ಆನಂದ್ ಮಾತನಾಡಿ,  ಸಿಕ್ಕಿರುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಂಡು ತಾಲ್ಲೂಕಿನಲ್ಲಿನ ಎಲ್ಲಾ ಗ್ರಾಮ ಪಂಚಾಯಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಕೆಪಿಸಿಸಿ ಸದಸ್ಯ ಎ.ಸಿ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಭಾರತಿ ಲಕ್ಷ್ಮಣಗೌಡ, ದಿನ್ನೂರು ವೆಂಕಟೇಶ್, ಜಗನ್ನಾಥ್, ಲಕ್ಷ್ನಣಗೌಡ, ಬೂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಶ್ರೀನಿವಾಸಗೌಡ, ಚನ್ನಹಳ್ಳಿ ರಾಜಣ್ಣ, ಎಸ್.ಪಿ.ಮುನಿರಾಜು, ಶಾಂತಕುಮಾರ್, ಹಳಿಯೂರು ರಘುಪತಿ, ಯುವ ಘಟಕದ ಜಿಲ್ಲಾಧ್ಯಕ್ಷ ನಾಗೇಶ್ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.