ದೇವನಹಳ್ಳಿ: ಜಿಲ್ಲೆಯಲ್ಲಿನ ಅನಧಿಕೃತ ಹೋಂಸ್ಟೇಗಳನ್ನು ತಕ್ಷಣ ಸ್ಥಗಿತಗೊಳಿಸುವಂತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಹಾಯಕ ನಿರ್ದೇಶಕ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಹೆಚ್ಚುತ್ತಿರುವ ಹಿನ್ನೆಲೆ ವಿವಿಧ ತಾಲ್ಲೂಕುಗಳಲ್ಲಿ ಅನೇಕ ಹೋಂಸ್ಟೇಗಳು ಕಾರ್ಯನಿರ್ವಹಿಸುತ್ತಿವೆ. ಪ್ರವಾಸಿಗರ ಸುರಕ್ಷತೆ, ಗುಣಮಟ್ಟದ ಸೇವೆ ಮತ್ತು ಕಾನೂನುಬದ್ಧ ನಿರ್ವಹಣೆ ದೃಷ್ಟಿಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ–2015 ಅನ್ವಯ ಹೋಂಸ್ಟೇಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನೋಂದಣಿ ಪಡೆಯದೆ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇ ಮಾಲೀಕರು ಅಗತ್ಯ ದಾಖಲೆ ಸಲ್ಲಿಸಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಅಧಿಕೃತ ನೋಂದಣಿ ಪತ್ರ ಪಡೆದ ನಂತರವೇ ಹೋಂಸ್ಟೇಗಳನ್ನು ನಡೆಸಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗೆ ದೂ. 080-22040633.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-15-106821503

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.