ದೇವನಹಳ್ಳಿ: ತಾಲ್ಲೂಕಿನ ಬೆಟ್ಟಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಸಂದ್ರ, ಬೆಟ್ಟಕೋಟೆ ಹಾಗೂ ಬಾಲದಿಮ್ಮನಹಳ್ಳಿ ಗ್ರಾಮಗಳನ್ನು ದೇವನಹಳ್ಳಿ ಪುರಸಭೆ ವ್ಯಾಪ್ತಿಗೆ ಸೇರ್ಪಡೆ ಮಾಡಬಾರದು ಎಂದು ಗ್ರಾಮಸ್ಥರು ಒತ್ತಾಯಿಸಿ ಸೋಮವಾರ ಜಿಲ್ಲಾಧಿಕಾರಿ ಕೆ.ಎನ್.ಅನುರಾಧ ಅವರಿಗೆ ಮನವಿ ಸಲ್ಲಿಸಿದರು.

‘35 ವರ್ಷಗಳಿಂದ ಬೆಟ್ಟಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಆಡಳಿತಾತ್ಮಕವಾಗಿ ಮುಂದುವರೆದಿರುವ ಈ ಗ್ರಾಮಗಳನ್ನು ಯಥಾಸ್ಥಿತಿಯಲ್ಲಿ ಉಳಿಸಬೇಕು. ಪಂಚಾಯತ್ ರಾಜ್ ಕಾಯ್ದೆಯಡಿ ಚುನಾವಣೆ ನಡೆಸಬೇಕಾದ ಸಂದರ್ಭದಲ್ಲಿ, ಅವಧಿ ಮುಗಿದ ನಂತರವೂ ಪುರಸಭೆ ವ್ಯಾಪ್ತಿ ವಿಸ್ತರಣೆಯಂತಹ ನಿರ್ಧಾರಗಳನ್ನು ಕೈಗೊಳ್ಳುವುದು ಸಂವಿಧಾನಾತ್ಮಕ ವಿರೋಧಿ ಕೆಲಸ’ ಎಂದು ರಾಯಸಂದ್ರ ಸೋಮಶೇಖರ್ ತಿಳಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಟ್ಟಕೋಟೆ ಸೇರಿದಂತೆ ಇತರೆ ಗ್ರಾಮ ಪಂಚಾಯಿತಿಗಳಿಗೆ ಸಿಎಸ್ಆರ್ ನಿಧಿ ನೀಡಲಾಗುತ್ತಿದೆ. ಕೋಟ್ಯಂತರ ಹಣವನ್ನು ಹಳ್ಳಿ ಜನರ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ. ಅಭಿವೃದ್ಧಿ ಹೆಸರಿನಲ್ಲಿ ಈ ಸಿಎಸ್ಆರ್ ನಿಧಿಯನ್ನು ಅತಿಕ್ರಮಿಸಿಕೊಂಡು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಗ್ರಾಮೀಣ ಜನರಿಗೆ ನೀಡಲಾಗುತ್ತಿರುವ ಹಣವನ್ನು ದುರುಪಯೋಗ ಮಾಡಿಕೊಳ್ಳುವುದಕ್ಕಾಗಿ ಚುನಾಯಿತ ಸದಸ್ಯರು ಇಲ್ಲದೇ ಇರುವ ಸಮಯದಲ್ಲಿ ಪಂಚಾಯಿತಿಗಳನ್ನು ವಿಸರ್ಜನೆ ಮಾಡಲು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಗ್ರಾಮಗಳನ್ನು ಪುರಸಭೆಗೆ ಸೇರ್ಪಡೆ ಮಾಡುವುದನ್ನು ವಿರೋಧಿಸುವುದಾಗಿ ಗ್ರಾಮಸ್ಥರು ಸರ್ವಾನುಮತದಿಂದ ಈಗಾಗಲೇ ತೀರ್ಮಾನಿಸಿದ್ದಾರೆ. ರಾಯಸಂದ್ರ, ಬೆಟ್ಟಕೋಟೆ ಮತ್ತು ಬಾಲದಿಮ್ಮನಹಳ್ಳಿ ಗ್ರಾಮಗಳಲ್ಲಿ ಹೆಚ್ಚು ಶೂದ್ರ, ಅತೀಶೂದ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರೆ ವಾಸ ಮಾಡುತ್ತಿದ್ದು ಗ್ರಾಮ ಪಂಚಾಯಿತಿಯಿಂದ ಹಲವು ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಪುರಸಭೆ ವ್ಯಾಪ್ತಿಗೆ ಬಂದರೆ ನಗರವಾಸಿಗಳೆಂದು ಗುರುತಿಸಿ ಸರ್ಕಾರದ ಬಹಳಷ್ಟು ಯೋಜನೆಗಳು ಸ್ಥಗಿತಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-15-897201818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.