ದೇವನಹಳ್ಳಿ: ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೆ, ಮನೆಮಟ್ಟದಲ್ಲೇ ಒಣ, ಹಸಿ, ನೈರ್ಮಲ್ಯ ಹಾಗೂ ವಿಶೇಷ ಆರೈಕೆ ತ್ಯಾಜ್ಯ ಎಂದು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಬೇಕು. ಸ್ಥಳೀಯ ಸಂಸ್ಥೆಗಳ ಸ್ವಚ್ಛ ವಾಹಿನಿ ವಾಹನಗಳಿಗೆ ಹಸ್ತಾಂತರಿಸುವ ಮೂಲಕ ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ ಸಲಹೆ ನೀಡಿದರು.

ತಾಲ್ಲೂಕಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ವತಿಯಿಂದ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ಹಮ್ಮಿಕೊಂಡಿದ್ದ ‘ಘನತ್ಯಾಜ್ಯ ನಿರ್ವಹಣೆ ನಿಯಮ–2026’ ಅನುಷ್ಠಾನ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ನಾಗರಿಕರು ತಮ್ಮ ಮನೆ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ ನೀಡುವುದು ಕಡ್ಡಾಯವಾಗಿದೆ. ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ಹಾಗೂ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂಬ ಅರಿವು ಹೊಂದಬೇಕು ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಸ್ವಚ್ಛ ವಾಹಿನಿ ವಾಹನಗಳು ಮನೆ ಬಾಗಿಲಿಗೆ ಬಂದಾಗ ಪ್ರತ್ಯೇಕವಾಗಿ ವಿಂಗಡಿಸಿದ ತ್ಯಾಜ್ಯವನ್ನು ನೀಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.

ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳು ತ್ಯಾಜ್ಯ ನಿರ್ವಹಣೆಗಾಗಿ ಅಗತ್ಯ ಮೂಲಸೌಕರ್ಯ ನಿರ್ಮಾಣಕ್ಕೆ ಸೂಕ್ತ ಜಾಗ ಒದಗಿಸುವಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎಸ್.ರಮೇಶ್ ಮಾತನಾಡಿ, ನಿಯಮಗಳ ಪ್ರಕಾರ ಆಹಾರದ ಅವಶೇಷ, ತರಕಾರಿ ಸಿಪ್ಪೆ ಸೇರಿದಂತೆ ಅಡುಗೆ ತ್ಯಾಜ್ಯವನ್ನು ಹಸಿ ತ್ಯಾಜ್ಯ, ಕಾಗದ, ಪ್ಲಾಸ್ಟಿಕ್, ಲೋಹ ಹಾಗೂ ಗಾಜ ಅನ್ನು ಒಣ ತ್ಯಾಜ್ಯ, ಡೈಪರ್ ಹಾಗೂ ನ್ಯಾಪ್ಕಿನ್ಗಳನ್ನು ನೈರ್ಮಲ್ಯ ತ್ಯಾಜ್ಯ ಮತ್ತು ಬ್ಯಾಟರಿ, ಔಷಧ, ಬಲ್ಬ್ಗಳನ್ನು ವಿಶೇಷ ಆರೈಕೆ ತ್ಯಾಜ್ಯ ಎಂದು ಪ್ರತ್ಯೇಕಿಸುವುದು ಕಡ್ಡಾಯ ಎಂದರು.

ತ್ಯಾಜ್ಯ ನಿರ್ವಹಣಾ ನಿಯಮ ಪಾಲಿಸದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಮೇಲೆ ಪರಿಸರ ದಂಡ ವಿಧಿಸಲಾಗುವುದು. ದೊಡ್ಡ ವಸತಿ ಸಮುಚ್ಚಯ, ವಿಶ್ವವಿದ್ಯಾಲಯಗಳು, ಶಾಪಿಂಗ್ ಮಾಲ್ಗಳು ಹಾಗೂ ಸರ್ಕಾರಿ ಕಟ್ಟಡಗಳಂತಹ ಬೃಹತ್ ತ್ಯಾಜ್ಯ ಉತ್ಪಾದಕರು ತಾವು ಉತ್ಪಾದಿಸುವ ತ್ಯಾಜ್ಯವನ್ನು ಸ್ಥಳದಲ್ಲೇ ವಿಂಗಡಿಸಿ ಸಂಸ್ಕರಿಸುವ ಜವಾಬ್ದಾರಿ ಹೊಂದಿರುತ್ತಾರೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸಂಚಾರಿ ಸಂಪತ್, ಪರಿಸರ ಮಾಲಿನ್ಯ ತಡೆಯಲು ಘನತ್ಯಾಜ್ಯ ನಿರ್ವಹಣಾ ನಿಯಮಗಳ ಪಾಲನೆ ಅತ್ಯವಶ್ಯ ಎಂದು ಹೇಳಿದರು. ಪ್ಲಾಸ್ಟಿಕ್ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ತ್ಯಾಜ್ಯ ವಿಂಗಡಣೆಯಿಂದ ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ತ್ಯಾಜ್ಯ ನಿರ್ವಹಣೆ ಸುಲಭವಾಗಲಿದೆ ಎಂದು ತಿಳಿಸಿದರು.

ಪೌರಕಾರ್ಮಿಕರ ಸೇವೆಯನ್ನು ಸಮಾಜ ಗೌರವಿಸಬೇಕು. ಅವರ ಪರಿಶ್ರಮದಿಂದಲೇ ನಗರ ಮತ್ತು ಪಟ್ಟಣಗಳು ಸ್ವಚ್ಛವಾಗಿವೆ ಎಂಬುದನ್ನು ಮರೆಯಬಾರದು ಎಂದರು.

ಜನಪ್ರತಿನಿಧಿಗಳು ಮನೆಮಟ್ಟದಲ್ಲಿ ತ್ಯಾಜ್ಯ ವಿಂಗಡಣೆ ಕುರಿತು ಜಾಗೃತಿ ಮೂಡಿಸಬೇಕು. ರೈತರು ಹಸಿ ತ್ಯಾಜ್ಯದಿಂದ ಸಾವಯವ ಗೊಬ್ಬರ ತಯಾರಿಸಿ ರಾಸಾಯನಿಕ ಗೊಬ್ಬರ ಬಳಕೆ ಕಡಿಮೆ ಮಾಡುವತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

41ಬೃಹತ್ ತ್ಯಾಜ್ಯ ಉತ್ಪಾದಕರ ಗುರುತು: ದಿನಕ್ಕೆ 100 ಕೆ.ಜಿ.ಗಿಂತ ಹೆಚ್ಚು ತ್ಯಾಜ್ಯ ಉತ್ಪಾದಿಸುವ ಅಪಾರ್ಟ್ಮೆಂಟ್, ಹೋಟೆಲ್, ಆಸ್ಪತ್ರೆ ಹಾಗೂ ಶಾಪಿಂಗ್ ಮಾಲ್ಗಳನ್ನು ‘ಬಲ್ಕ್ ವೇಸ್ಟ್ ಜನರೇಟರ್ಸ್’ ಎಂದು ಗುರುತಿಸಲಾಗುತ್ತದೆ. ಜಿಲ್ಲೆಯಲ್ಲಿ ಇಂತಹ 41 ಸಂಸ್ಥೆಗಳನ್ನು ಗುರುತಿಸಲಾಗಿದೆ. ನಿಯಮಾನುಸಾರ ತ್ಯಾಜ್ಯ ವಿಂಗಡಣೆ ಮಾಡದಿದ್ದರೆ ದಂಡ ವಿಧಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ಎಚ್ಚರಿಸಿದರು.

ಕಾರ್ಯಾಗಾರದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ವೆಂಕಟೇಶ್ ಬಂತಿ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ್ ಕುಮಾರ್, ವಿವಿಧ ನಗರಸಭೆ ಮತ್ತು ಪುರಸಭೆಗಳ ಸದಸ್ಯರು, ಪೌರಾಯುಕ್ತರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-15-355103382

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.