ದೇವನಹಳ್ಳಿ: ರೈತರ ಕೃಷಿ ಚಟುವಟಿಕೆಗಳಿಗೆ ಬೇಕಾಗುವ ಗೊಬ್ಬರ, ಔಷಧಿ ಹಾಗೂ ಇನ್ನಿತರೆ ಉತ್ಪನ್ನಗಳನ್ನು ಕಡಿಮೆ ಬೆಲೆಯಲ್ಲಿ ಪೂರೈಸುತ್ತಾ ರೈತರ ಬೆನ್ನೆಲುಬಿಗೆ ಸಹಕಾರ ಸಂಘಗಳು ನಿಂತಿವೆ. ರೈತ ದೇಶದ ಬೆನ್ನೆಲಾದರೆ ಸಹಕಾರ ಸಂಘಗಳು ರೈತರ ಬೆನ್ನೆಲುಬು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ದೇವನಹಳ್ಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನಷ್ಟು ಬೆಳೆಯಬೇಕು ಎಂದರು.

ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಸರ್ಕಾರದಿಂದ ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಬಹಳಷ್ಟು ಕೊಡುಗೆ ನೀಡುತ್ತಿದೆ. ಸಹಕಾರ ಸಂಘಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಲುಪಿಸಲು ಕ್ರಮ ವಹಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ ಎನ್ ಅನುರಾಧ, ಬಯಪ ಅಧ್ಯಕ್ಷ ಶಾಂತಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮಂಜುನಾಥ್, ಇಒ ಶ್ರೀನಾಥ್ ಗೌಡ, ತಹಶೀಲ್ದಾರ್ ಅನಿಲ್ ಉಪಸ್ಥಿತರಿದ್ದರು.

Quote - ವಿಶ್ವನಾಥಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂಬತ್ತು ನೂತನ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲಾಗಿದ್ದು. ₹98 ಲಕ್ಷ ವೆಚ್ಚ ಭರಿಸಲಾಗಿದೆ. ಈ ಕಟ್ಟಡಗಳಿಂದ ತಿಂಗಳಿಗೆ ₹1 ಲಕ್ಷ ಬಾಡಿಗೆ ಬರುವ ನಿರೀಕ್ಷೆ ಇದೆ ಶ್ರೀನಾಥ್ ಗೌಡ ಇಒ ತಾ.ಪಂ

Cut-off box - ಆದಾಯ ಅಭಿವೃದ್ಧಿಗೆ ಬಳಕೆಯಾಗಲಿ ಸ್ಥಳೀಯ ಆಡಳಿತ ಹಾಗೂ ಸರ್ಕಾರಕ್ಕೆ ಬರುವ ಆದಾಯ ಸದುಪಯೋಗ ಪಡೆದುಕೊಂಡರೆ ಗ್ರಾಮ ಜಿಲ್ಲೆ ರಾಜ್ಯ ದೇಶದ ಅಭಿವೃದ್ಧಿಗೆ ಪೂರಕ. ಪಂಚಾಯಿತಿಗಳಿಗೆ ಬರುವ ಹಣ ಸದ್ಬಳಕೆ ಆಗಬೇಕು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ತಾಲ್ಲೂಕಿನ ವಿಶ್ವನಾಥಪುರದಲ್ಲಿ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿಯಿಂದ ನಿರ್ಮಿಸಿರುವ ನೂತನ ವಾಣಿಜ್ಯ ಅಂಗಡಿ ಮಳಿಗೆಗಳ ಸಂಕೀರ್ಣ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸಾಗಿಸಲು ಪಂಚಾಯಿತಿ ವ್ಯವಸ್ಥೆ ನರೇಗಾ ಯೋಜನೆ ಜಾರಿಗೆ ತರಲಾಯಿತು. ಕುಡಿಯುವ ನೀರು ರಸ್ತೆ ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಗ್ರಾಮಗಳ ಸಬಲೀಕರಣ ಮಾಡಲಾಗುತ್ತಿದೆ ಎಂದರು. ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ಹತ್ತು ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ಹಾಗೂ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಸಚಿವರು ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.