ದೇವನಹಳ್ಳಿ: ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯದ ಮಹತ್ವ ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ಗೌಡ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.

ಅಂಬೇಡ್ಕರ್ ಅವರು ಕೇವಲ ಒಬ್ಬ ನಾಯಕನಲ್ಲ. ಅವರು ಅಪ್ರತಿಮ ಜ್ಞಾನದಾಹಿ, ಮಹಾನ್ ಚಿಂತಕ ಮತ್ತು ಸಮಾಜ ಸುಧಾರಕ. ‘ಶಿಕ್ಷಣ ಪಡೆಯಿರಿ, ಸಂಘಟಿತರಾಗಿ, ಹೋರಾಡಿ’ ಎಂಬ ಅವರ ಮಾತುಗಳು ಇಂದಿನ ಯುವಕರಿಗೂ ಮಾರ್ಗದರ್ಶನ ನೀಡುತ್ತಿವೆ ಎಂದರು.

ಬಡತನ ಮತ್ತು ಸಾಮಾಜಿಕ ಅಸಮಾನತೆ ನಡುವೆಯೂ ಅವರು ಕಠಿಣ ಪರಿಶ್ರಮದಿಂದ ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾಭ್ಯಾಸ ಮಾಡಿ ದೊಡ್ಡ ಸಾಧನೆ ಮಾಡಿದರು. ಅವರ ಜೀವನ ಯುವಕರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು.

ಭಾರತದ ಸಂವಿಧಾನವನ್ನು ರಚಿಸುವ ಮೂಲಕ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದ ಮಹಾನ್ ವ್ಯಕ್ತಿ ಎಂದು ಸ್ಮರಿಸಿದರು.

ಶೋಷಿತ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅವರು ಹೋರಾಡಿದ ರೀತಿಯು ಎಲ್ಲರಿಗೂ ಮಾದರಿಯಾಗಿದೆ. ಮಹಿಳಾ ಹಕ್ಕುಗಳ ಪರವೂ ಅವರು ಮಹತ್ವದ ಕೆಲಸ ಮಾಡಿದ್ದಾರೆ ಎಂದು ಹೇಳಿದರು,

ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸುಧಾ, ಕಚೇರಿ ವ್ಯವಸ್ಥಾಪಕಿ ಶರಣ್ಯ, ರಾಧಮ್ಮ, ಚೈತ್ರ, ಚಂದ್ರಪ್ಪ, ಹರೀಶ್ ಸಿಬ್ಬಂದಿ ಪ್ರಕಾಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-15-193648683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.